Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಸತಿ ನಿಲಯದಲ್ಲಿ ಅಸ್ವಚ್ಛತೆ,...

Bidar | ವಸತಿ ನಿಲಯದಲ್ಲಿ ಅಸ್ವಚ್ಛತೆ, ಮೂಲಸೌಕರ್ಯ ಕೊರತೆ: ಅಧಿಕಾರಿಗಳ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗ ಸದಸ್ಯರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ3 Sept 2026 8:12 PM IST
share
Bidar | ವಸತಿ ನಿಲಯದಲ್ಲಿ ಅಸ್ವಚ್ಛತೆ, ಮೂಲಸೌಕರ್ಯ ಕೊರತೆ: ಅಧಿಕಾರಿಗಳ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗ ಸದಸ್ಯರ ಅಸಮಾಧಾನ

ಬೀದರ್: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಂಡುಬಂದ ಅಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಗುರುವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು ವಾಸಿಸುವ ಕೊಠಡಿಗಳು, ಅಡುಗೆ ಕೋಣೆ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಕೊಠಡಿಗಳಲ್ಲಿ ಅಸ್ವಚ್ಛತೆ, ಹರಿದ ಹಾಸಿಗೆಗಳು ಕಂಡುಬಂದಿದ್ದು, ಕಿಟಕಿಗಳ ಗಾಜು ಒಡೆದಿರುವುದನ್ನು ಮುಚ್ಚಲು ವಿದ್ಯಾರ್ಥಿಗಳ ಹಾಸಿಗೆಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಾತ್‌ರೂಮ್ ಪಕ್ಕದಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು, ವಸತಿ ನಿಲಯದಲ್ಲಿ ಸೊಳ್ಳೆಗಳ ಕಾಟ ಹಾಗೂ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಕಾಪಾಡದಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಕನಿಷ್ಠ 15–20 ದಿನಗಳಿಗೊಮ್ಮೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವ್ಯವಸ್ಥೆ ಉಂಟಾಗಿದೆ ಎಂದು ಜಗನ್ನಾಥ ಹಲಮಡಗಿ ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಯನ್ನು ಬಿಟ್ಟು ಉತ್ತಮ ಶಿಕ್ಷಣ ಪಡೆಯುವ ಉದ್ದೇಶದಿಂದ ವಸತಿ ನಿಲಯಕ್ಕೆ ಬಂದಿರುತ್ತಾರೆ. ಅವರನ್ನು ಕೇವಲ ವಸತಿ ನಿಲಯದ ವಿದ್ಯಾರ್ಥಿಗಳೆಂದು ನೋಡದೆ ತಮ್ಮ ಮಕ್ಕಳಂತೆ ಕಾಣಬೇಕು. ಮಕ್ಕಳಿಗೆ ಮನೆಯಲ್ಲಿ ಸಿಗುವಂತಹ ಸ್ವಚ್ಛತೆ, ಸುರಕ್ಷತೆ, ಉತ್ತಮ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.

ವಸತಿ ನಿಲಯದಲ್ಲಿನ ಅವ್ಯವಸ್ಥೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಮಕ್ಕಳ ಹಕ್ಕುಗಳ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಜಗನ್ನಾಥ ಹಲಮಡಗಿ ತಿಳಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X