Bidar : ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಿನ್ಸಿಪಾಲ್ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜಕುಮಾರ್ ಮಾಳಗೆ
ಬೀದರ್ : ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಿನ್ಸಿಪಾಲ್ ರಾಜ್ಕುಮಾರ್ ಮಾಳಗೆ ಅವರ ಮನೆ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ರಾಜ್ಕುಮಾರ್ ಮಾಳಗೆ ಅವರಿಗೆ ಸೇರಿದ ಬೀದರ್ ನಗರದ ಗುರುನಾನಕ್ ಕಾಲೋನಿಯಲ್ಲಿರುವ ಮನೆ, ಬೆಂಗಳೂರಿನಲ್ಲಿರುವ ಮನೆ, ಕೋಳಾರ್ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶೆಡ್, ಅವರಿಗೆ ಸೇರಿದ ಸುಮಾರು 7 ಶಾಲಾ ಕಾಲೇಜುಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಶಾರದಾ ಸ್ಕೂಲ್ ಆಫ್ ನರ್ಸಿಂಗ್, ಶಾರದಾ ಕಾಲೇಜ್ ಆಫ್ ನರ್ಸಿಂಗ್, ಸರಸ್ವತಿ ಸ್ಕೂಲ್ ಆಫ್ ನರ್ಸಿಂಗ್, ಸೃಷ್ಟಿ ಸ್ಕೂಲ್ ಆಫ್ ನರ್ಸಿಂಗ್, ಶಾರದಾ ಸ್ಕೂಲ್ ಆಫ್ ಫಾರ್ಮಸಿ, ಆರ್ ಎಂ ಕಾಲೇಜ್ ಆಫ್ ಫಿಸಿಯೋಥೆರಪಿ, ಗ್ಲೋಬಲ್ ಸ್ಕೂಲ್ ಆಫ್ ನರ್ಸಿಂಗ್ ಔರಾದ್ ಹೀಗೆ ಏಳು ಶಾಲಾ ಕಾಲೇಜು ಹೊಂದಿದ್ದು, ಶಾಲಾ ಕಾಲೇಜು ಬಸ್ಸುಗಳನ್ನು ಕೂಡ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಅದೇ ರೀತಿಯಲ್ಲಿ ರಾಜಕುಮಾರ್ ಮಾಳಗೆ ಅವರ ಸ್ವಂತ ತಮ್ಮ ವಿಜಯಕುಮಾರ್ ಮಾಳಗೆ ಎನ್ನುವವರಿಗೆ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಗುತ್ತಿಗೆ ಆಧಾರದ ಮೇಲೆ ಹುದ್ದೆ ನೀಡಲಾಗಿದ್ದು, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ .
ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್ಪಿ ಹನುಮಂತರಾಯ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗಿದೆ.







