ಬೀದರ್ | ಫೆ.27 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ್ : ಫೆ.27 ರಂದು ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಬೀದರ್ ಲೋಕಾಯುಕ್ತ ಪೊಲೀಸ್ ಠಾಣೆಯ ವತಿಯಿಂದ ಅಹವಾಲು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11:30 ಗಂಟೆಯಿಂದ 1:30 ಗಂಟೆವರೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕr ಕುಂದುಕೊರತೆ, ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ : 1 ಮತ್ತು 2ನ್ನು ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story





