Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ...

ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು: ವೀರಶೆಟ್ಟಿ ಚನ್ನಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ18 Jun 2026 8:13 PM IST
share
ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು: ವೀರಶೆಟ್ಟಿ ಚನ್ನಶೆಟ್ಟಿ
ಬೀದರ್: ಮಲೇರಿಯಾ ಮಾಸಾಚರಣೆ, ಶಾಲಾ ಮಕ್ಕಳಿಗೆ ಅರಿವು ಜಾಗೃತಿ ಕಾರ್ಯಕ್ರಮ

ಬೀದರ್ : ಶಾಲಾ ಆವರಣ ಹಾಗೂ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ ಅವರು ಕರೆ ನೀಡಿದರು.

ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯವರ ಸಂಯುಕ್ತಾಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ವಿಶೇಷ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಮಲೇರಿಯಾ, ಆನೆಕಾಲು, ಡೆಂಗ್ಯೂ, ಚಿಕನ್‌ಗುನ್ಯ ಕುರಿತು ತಿಳಿಸುತ್ತಾ, ಮಲೇರಿಯಾ ಜ್ವರವು ಹೆಣ್ಣು ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಈ ಸೊಳ್ಳೆಗಳು ಹೆಚ್ಚಾಗಿ ಸ್ವಚ್ಛ ಹಾಗೂ ನಿಂತ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಜೂನ್ ತಿಂಗಳನ್ನು ಮಲೇರಿಯಾ ಮಾಸಾಚರಣೆ ಎಂದು ಆಚರಿಸಲಾಗುತ್ತಿದ್ದು, ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಲ್ಲಿ ರೋಗದ ಬಗ್ಗೆ ಮುನ್ನೆಚ್ಚರಿಕೆ ಜಾಗೃತಿ ವಹಿಸಬೇಕು ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಮ್ಮದ್ ಮಹೆಬೂಬ್ ಮಿಯ್ಯಾ ಅವರು ಮಾತನಾಡಿ, ಸೊಳ್ಳೆಗಳ ಉತ್ಪತ್ತಿ ತಾಣಗಳಾದ ತೆರೆದ ಟ್ಯಾಂಕ್‌ಗಳು, ಹಳೆಯ ಟೈರ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಹಾಗೂ ಕುಂಡಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ತೀವ್ರ ಜ್ವರ, ನಡುಕ, ಚಳಿ ಮತ್ತು ತಲೆ ನೋವು ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇಂತಹ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ರಕ್ತ ಪರೀಕ್ಷೆ ಹಾಗೂ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸಮಿಯೊದಿನ್, ಶಾಲೆಯ ಮುಖ್ಯಗುರು ರಾಘವೇಂದ್ರ ಕುಲಕರ್ಣಿ, ಸಹ ಶಿಕ್ಷಕ ರವೀಂದ್ರ ಹೊಗಾಡೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ರಾಜಕುಮಾರ್ ಗಾದಗಿ, ಸೂರ್ಯಕಾಂತ್ ಸಿಂದಬಂದಗಿ, ಅಶ್ವಿನಿ, ಶ್ರೀದೇವಿ ಹಾಗೂ ಶಶಿಕಾಂತ್ ಬಿರಾದಾರ್ ಸೇರಿದಂತೆ‌ ಆರೋಗ್ಯ ಇಲಾಖೆಯ ಮೇಲ್ವಿಚಾರಕರು, ಆರೋಗ್ಯ ಕಾರ್ಯಕರ್ತೆಯರು, ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

Tags

BidarSchoolchildrenmalaria
share
ವಾರ್ತಾಭಾರತಿ
ವಾರ್ತಾಭಾರತಿ
Next Story
X