ಬೀದರ್ | ಕಾಲು ಜಾರಿ ಬಾವಿಗೆ ಬಿದ್ದು ಯುವಕ ಮೃತ್ಯು

ಬೀದರ್ : ಕಾಲು ಜಾರಿ ಬಾವಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಭಾಲ್ಕಿ ಪಟ್ಟಣದ ರಾಮತೀರ್ಥವಾಡಿ ಕ್ರಾಸ್ ಸಮೀಪ ಸಂಭವಿಸಿದೆ.
ಬಸವನಗರ್ ಗ್ರಾಮದ ನಿವಾಸಿ ಸುನಿಲ್ (30) ಮೃತ ವ್ಯಕ್ತಿಯಾಗಿದ್ದಾನೆ.
ಮನೆಯ ಸಮೀಪದಲ್ಲಿರುವ ಬಾವಿಯ ಬಳಿ ಮಧ್ಯಾಹ್ನದ ವೇಳೆ ತೆರಳಿದ್ದಾಗ ಸುನಿಲ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಮಾಹಿತಿ ದೊರೆತ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬಾವಿಯಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಭಾಲ್ಕಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story




