Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ತೋಟಗಾರಿಕೆ ಕ್ಷೇತ್ರದ...

Bidar | ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಮರಿಗೌಡರ ಕೊಡುಗೆ ಅನನ್ಯ: ಡಾ.ಎಸ್.ವಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 Aug 2026 6:30 PM IST
share
Bidar | ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಮರಿಗೌಡರ ಕೊಡುಗೆ ಅನನ್ಯ: ಡಾ.ಎಸ್.ವಿ.ಪಾಟೀಲ್

ಬೀದರ್: ಡಾ. ಎಂ.ಎಚ್. ಮರಿಗೌಡ ಅವರು ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದ ಮಹನೀಯರಾಗಿದ್ದು, ರೈತಪರ ಯೋಜನೆಗಳು, ಗುಣಮಟ್ಟದ ಸಸಿಗಳ ಉತ್ಪಾದನೆ, ತೋಟಗಾರಿಕೆ ಬೆಳೆಗಳ ವಿಸ್ತರಣೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳ ಪ್ರಸಾರದಲ್ಲಿ ಅವರ ಸೇವೆ ಅನನ್ಯವಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಸ್.ವಿ. ಪಾಟೀಲ್ ಹೇಳಿದರು.

ನಗರದ ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ಡಾ. ಎಂ.ಎಚ್. ಮರಿಗೌಡ ಅವರ 110ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ತೋಟಗಾರಿಕಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹವಾಮಾನ ವೈಪರೀತ್ಯ, ನೀರಿನ ಕೊರತೆ, ಉತ್ಪಾದನಾ ವೆಚ್ಚದ ಹೆಚ್ಚಳ ಹಾಗೂ ಮಾರುಕಟ್ಟೆ ಸವಾಲುಗಳ ನಡುವೆಯೂ ಆಧುನಿಕ ತಂತ್ರಜ್ಞಾನ, ಸೂಕ್ಷ್ಮ ನೀರಾವರಿ, ಸಂರಕ್ಷಿತ ಕೃಷಿ, ಮೌಲ್ಯವರ್ಧನೆ, ಸಂಸ್ಕರಣೆ ಹಾಗೂ ರಫ್ತು ಅವಕಾಶಗಳ ಮೂಲಕ ತೋಟಗಾರಿಕೆ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಸಾಧಿಸಬಹುದು ಎಂದರು.

ವಿದ್ಯಾರ್ಥಿಗಳು ಸಂಶೋಧನಾ ಮನೋಭಾವ ಬೆಳೆಸಿಕೊಂಡು ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು. ಗುಣಮಟ್ಟದ ಉತ್ಪಾದನೆ, ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆ, ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಡಿಮೆ ಫಲವತ್ತತೆಯ ಜಮೀನಿನಲ್ಲಿಯೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ರೈತರು ತಮ್ಮ ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರಗತಿಪರ ರೈತ ವೈಜನಾಥ್ ನಿಡೋದ ಮಾತನಾಡಿ, ಕರ್ನಾಟಕವನ್ನು ದೇಶದಲ್ಲೇ ಪ್ರಮುಖ ತೋಟಗಾರಿಕಾ ರಾಜ್ಯವನ್ನಾಗಿಸುವಲ್ಲಿ ಡಾ. ಎಂ.ಎಚ್. ಮರಿಗೌಡ ಅವರ ಕೊಡುಗೆ ಮಹತ್ವದ್ದಾಗಿದೆ. ರಾಜ್ಯದಲ್ಲಿ ಪ್ರಪ್ರಥಮವಾಗಿ ತೋಟಗಾರಿಕೆ ಇಲಾಖೆಯನ್ನು ಕೃಷಿ ಇಲಾಖೆಗೆ ಸಮಾನವಾಗಿ ಅಭಿವೃದ್ಧಿಪಡಿಸುವಲ್ಲಿ ಹಾಗೂ ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ರೂಪಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದರು.

ರೈತರಿಗೆ ವಿವಿಧ ಜಾತಿಯ ಸೊಪ್ಪಿನ ಬೀಜಗಳು ಹಾಗೂ ಸಸಿಗಳನ್ನು ಉಚಿತವಾಗಿ ದೊರಕುವಂತೆ ವ್ಯವಸ್ಥೆ ಮಾಡಿದ್ದಲ್ಲದೆ, ತೋಟಗಾರಿಕೆ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೂ ಮರಿಗೌಡರು ಕಾರಣೀಭೂತರಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೋಟಗಾರಿಕಾ ಉತ್ಪಾದಕರ ಸಹಕಾರಿ ಮಾರಾಟ ಮಳಿಗೆಗಳು ಹಾಗೂ ಹಾಪ್‌ಕಾಮ್ಸ್‌ಗಳ ಸ್ಥಾಪನೆಗೆ ಅವರ ಕೊಡುಗೆ ಇದೆ ಎಂದು ಹೇಳಿದರು.

ಕೇವಲ ದಿನಾಚರಣೆ ಆಚರಿಸಿದರೆ ಸಾಲದು. ಪ್ರತಿಯೊಬ್ಬರೂ ಪ್ರತಿವರ್ಷ ಕನಿಷ್ಠ ಒಂದೆರಡು ಹಣ್ಣಿನ ಗಿಡಗಳನ್ನು ನೆಟ್ಟು ಬೆಳೆಸಿದಾಗ ಇಂತಹ ಕಾರ್ಯಕ್ರಮಗಳ ಆಚರಣೆಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ವೈಜನಾಥ್ ನಿಡೋದ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ನಿವೃತ್ತ ವೈದ್ಯಾಧಿಕಾರಿ ಹಾಗೂ ಪ್ರಗತಿಯಪರ ರೈತ ಡಾ. ಹನುಮಶೆಟ್ಟಿ, ಡಾ. ಕವಳೆ ನಾಗೇಂದ್ರ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದ ಅಧಿಕಾರಿ ಡಾ. ವಿಜಯಮಹಾಂತೇಶ್ ಹಾಗೂ ಡಾ. ರಮೇಶ್ ನಾಯ್ಕ್ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ಕಾರ್ಮಿಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದರು. ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಬೆಲ್ಲದ್ ಪ್ರಾರ್ಥಿಸಿದರು. ಗಣೇಶ್ ಡಿ. ಸ್ವಾಗತಿಸಿದರು. ಅನುಷ್ಕಾ ಅವರು ವಂದಿಸಿದರು. ಸುಪ್ರೀಯ ಟಿ. ಅವರು ನಿರೂಪಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X