Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜಿಲ್ಲಾ ದಲಿತ ಬಂಡಾಯ ಸಮ್ಮೇಳನದ...

Bidar | ಜಿಲ್ಲಾ ದಲಿತ ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ23 Oct 2026 8:21 PM IST
share
Bidar | ಜಿಲ್ಲಾ ದಲಿತ ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್: ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗುವ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ದಲಿತ ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ದಲಿತ ಬಂಡಾಯ ಹೋರಾಟಗಾರ ಹಾಗೂ ಸಾಮಾಜಿಕ ಚಿಂತಕ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಿರುವುದಕ್ಕೆ ಅವರ ಹಿತೈಷಿಗಳು, ಸಂಗಡಿಗರು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಳಲ್ಲಿ ದೀರ್ಘಕಾಲದಿಂದ ಅವರೊಂದಿಗೆ ಹೆಜ್ಜೆ ಹಾಕಿರುವ ಸಂಗಾತಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಆಯ್ಕೆಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ದಲಿತ ಬಂಡಾಯ ಚಳವಳಿ ಕೇವಲ ಸಾಹಿತ್ಯಿಕ ಅಭಿವ್ಯಕ್ತಿಯಲ್ಲ; ಅದು ಶೋಷಣೆ, ಜಾತಿ ತಾರತಮ್ಯ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಸಾಮಾಜಿಕ ಪರಿವರ್ತನೆಯ ಚಳವಳಿಯಾಗಿದೆ. ಸಾಹಿತ್ಯವನ್ನು ಜನರ ಬದುಕಿನೊಂದಿಗೆ ಬೆಸೆದು, ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು, ಹಕ್ಕು, ಸ್ವಾಭಿಮಾನ ಮತ್ತು ಸಮಾನತೆಯ ಆಶಯಗಳಿಗೆ ಧ್ವನಿಯಾದ ಈ ಚಳವಳಿಯ ಪರಂಪರೆಯಲ್ಲಿ ಮಾರುತಿ ಬೌದ್ಧೆ ಅವರಂತಹ ಹೋರಾಟಗಾರರಿಗೆ ಸಮ್ಮೇಳನದ ಅಧ್ಯಕ್ಷತೆಯ ಜವಾಬ್ದಾರಿ ದೊರೆತಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರ ಹಿತೈಷಿಗಳು ಅಭಿಪ್ರಾಯಪಟ್ಟಿದ್ದಾರೆ.

ಮಾರುತಿ ಬೌದ್ಧೆ ಅವರು ದಲಿತ ಬಂಡಾಯ ಚಳವಳಿಯ ಆಶಯಗಳೊಂದಿಗೆ ಗುರುತಿಸಿಕೊಂಡು, ಸಾಮಾಜಿಕ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಹೋರಾಟಗಳಲ್ಲಿ ತಮ್ಮದೇ ಆದ ಬದ್ಧತೆಯನ್ನು ಪ್ರದರ್ಶಿಸಿದವರು. ಸಮಾಜದ ಅಂಚಿನಲ್ಲಿರುವ ಜನರ ನೋವು-ನಲಿವುಗಳಿಗೆ ಸ್ಪಂದಿಸುವುದು, ಸಮಾನತೆ ಮತ್ತು ಸ್ವಾಭಿಮಾನದ ಮೌಲ್ಯಗಳನ್ನು ಎತ್ತಿಹಿಡಿಯುವುದು ಹಾಗೂ ಪ್ರಜಾಸತ್ತಾತ್ಮಕ ಆಶಯಗಳಿಗೆ ಬಲ ತುಂಬುವುದು ಅವರ ಸಾರ್ವಜನಿಕ ಬದುಕಿನ ಪ್ರಮುಖ ನೆಲೆಗಳಾಗಿವೆ.

ಅವರೊಂದಿಗಿನ ದೀರ್ಘಕಾಲದ ಒಡನಾಟ ಮತ್ತು ಹೋರಾಟದ ಅನುಭವಗಳನ್ನು ಸ್ಮರಿಸಿರುವ ಸಂಗಾತಿಗಳು, ಈ ಆಯ್ಕೆಯನ್ನು ಒಬ್ಬ ವ್ಯಕ್ತಿಗೆ ದೊರೆತ ಗೌರವ ಮಾತ್ರವಲ್ಲದೆ, ದಲಿತ ಬಂಡಾಯ ಚಳವಳಿಯ ಆಶಯಗಳಿಗೆ ಸಂದ ಮನ್ನಣೆಯಾಗಿದೆ ಎಂದು ಪರಿಗಣಿಸಿದ್ದಾರೆ.

ಈ ಕುರಿತು ಹಿತೈಷಿಗಳಾದ ವಿಠಲದಾಸ್ ಪ್ಯಾಗೆ, ಡಾ. ಕಾಶಿನಾಥ್ ಚೆಲ್ವಾ, ವಿಜಯಕುಮಾರ್ ಗಾಯಕವಾಡ್, ಗಾಲಿಬ್ ಹಾಶ್ಮಿ, ಖಲೀಲ್ ಮಿಯಾ, ಅರುಣ ಪಟೇಲ್, ಬಾಬು ಟೈಗರ್, ಮಹೇಶ್ ಗೋರನಾಳಕರ್, ವಿನಯಕುಮಾರ ಮಾಳಗೆ, ಅಶೋಕ್ ಗಾಯಕವಾಡ್, ಕಂಟೆಪ್ಪ ಪೂಜಾರಿ, ವಾಮನ್ ಮೈಸಲಗೆ, ಶಿವಶರಣಪ್ಪ ಹುಗ್ಗಿ ಪಾಟೀಲ್, ಮಲ್ಲಿಕಾರ್ಜುನ್ ಪಾಟೀಲ್, ರಾಜಕುಮಾರ್ ವಾಘಮೊರೆ, ಅಭಿ ಕಾಳೆ, ಸುಂದರ್ ಮಾಳೆಗಾಂವ್, ಜಗದೀಶ್ವರ್ ಬಿರಾದಾರ್ ಹಾಗೂ ವಿನೋದಕುಮಾರ್ ಬಂದ್ಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X