Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್‌ಐಆರ್ ರದ್ದುಗೊಳಿಸಲು...

Bidar | ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 May 2026 6:36 PM IST
share
Bidar | ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೀದರ್: ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ನಗರದಲ್ಲಿ ಎದ್ದೇಳು ಕರ್ನಾಟಕ ಸಂಘಟನೆ, ಎಸ್‌ಐಆರ್ ವಿರೋಧಿ ಕರ್ನಾಟಕ, ಪ್ರಗತಿಪರ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟದಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಡಾ.ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಸಿ ಮುಖಂಡರು ಮಾತನಾಡಿ, ಎಸ್‌ಐಆರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಬಳಿಕ ಪ್ರತಿಭಟನಾ ಮೆರವಣಿಗೆ ಮುಖಾಂತರ ಸಹಾಯಕ ಆಯುಕ್ತ ಕಚೇರಿಗೆ ತೆರಳಿ, ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯ ಚುನಾವಣಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಮನವಿ ಪತ್ರದಲ್ಲಿ, ಎಸ್‌ಐಆರ್ ಎಂಬುದು ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಹಾಗೂ ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯಾಗಿದೆ. ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕುಗಳನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ. ಸರ್ಕಾರ ಹಾಗೂ ಚುನಾವಣಾ ಆಯೋಗವು ಜನರಲ್ಲಿ ಗೊಂದಲ ಸೃಷ್ಟಿಸುವ ಬದಲು ಪಾರದರ್ಶಕ ಮತ್ತು ಸಂವಿಧಾನಬದ್ಧ ವಿಧಾನಗಳನ್ನು ಅನುಸರಿಸಬೇಕು ಎಂದು ಆಗ್ರಹಿಸಲಾಗಿದೆ.

ಸಂವಿಧಾನ, ಪ್ರಜಾತಂತ್ರ ವಿರೋಧಿ, ಜನ ವಿರೋಧಿಯಾದ ಎಸ್‌ಐಆರ್ ರದ್ದಾಗಬೇಕು. ಸಂವಿಧಾನಬದ್ಧ ಹಾಗೂ ಜನಸ್ನೇಹಿಯಾದ ಐಆರ್ ಜಾರಿಗೆ ತರಬೇಕು. ಲಾಜಿಕಲ್ ಡಿಸ್ಕ್ರಿಪೆನ್ಸಿ ಎನ್ನುವ ಅವೈಜ್ಞಾನಿಕ, ಅಪಾರದರ್ಶಕ ವಿಧಾನವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಳವಡಿಸಬಾರದು. ಜನವಿರೋಧಿ ಎಸ್‌ಐಆರ್ ವಿರುದ್ಧ ಸರ್ಕಾರವು ದಿಟ್ಟ ನಿಲುವು ತಾಳಬೇಕು ಎಂದು ಒತ್ತಾಯಿಸಲಾಗಿದೆ.

ಪ್ರಸ್ತುತ ಸ್ವರೂಪದ ಎಸ್ಐಆರ್ ಅನ್ನು ಒಪ್ಪುವುದಿಲ್ಲ ಎಂದು ಕರ್ನಾಟಕ ಸರ್ಕಾರ ಘೋಷಿಸಬೇಕು. ಕ್ಷುಲ್ಲಕ ವಿಚಾರಗಳು ಇಟ್ಟುಕೊಂಡು ಮತದಾನದ ಹಕ್ಕಿನಿಂದ ಯಾರನ್ನೇ ಹೊರಗಿಡುವುದು ಅಕ್ಷಮ್ಯ ಅಪರಾಧವಾಗಿದೆ. ಕರಡು ಪಟ್ಟಿ ತಯಾರಾದ ನಂತರ ಯಾರ ಮತವನ್ನಾದರೂ ಸುಲಭವಾಗಿ ಹುಡುಕಬಹುದಾದ ರೀತಿಯಲ್ಲಿ ನೀಡಬೇಕು ಎಂದು ತಿಳಿಸಲಾಗಿದೆ.

ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ಆ ಭಾಗದ ಮತದಾರರ ಕರಡು ಪಟ್ಟಿಯನ್ನು ಬಹಿರಂಗವಾಗಿ ಪ್ರಕಟಿಸಿ, ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. ಈ ಪ್ರಕ್ರಿಯೆಯನ್ನು ಗಡಿಬಿಡಿಯಲ್ಲಿ ನಡೆಸದೆ, ಕನಿಷ್ಟ ಒಂದು ವರ್ಷಗಳ ಅವಧಿ ನಿಗದಿ ಮಾಡಬೇಕು. ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಅಲೆಮಾರಿಗಳು, ಆದಿವಾಸಿಗಳು, ದಲಿತರು, ಬಡ ಅಲ್ಪಸಂಖ್ಯಾತರು ಮುಂತಾದ ದಾಖಲೆಗಳ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜನ ವರ್ಗಗಳು ಪ್ರಜಾತಾಂತ್ರಿಕ ಪ್ರಕ್ರಿಯೆಯಿಂದ ವಂಚಿತರಾಗದಂತೆ ಒಳಗೊಳ್ಳಲು ಅವರಿಗಾಗಿ ವಿಶೇಷ ಸರಳ ಕ್ರಮಗಳನ್ನು ರೂಪಿಸಬೇಕು ಎಂದು ಬೇಡಿಕೆ ಇಡಲಾಗಿದೆ.

ಚೆಕ್ ಮೇಟ್ ಪಟ್ಟಿ ತಯಾರಿಸಬೇಕು. ವೈಜ್ಞಾನಿಕ ಹಾಗೂ ಜನಸ್ನೇಹಿ ವಿಧಾನವನ್ನು ಬಳಸಿ ರಾಜ್ಯ ಚುನಾವಣಾ ಆಯೋಗದ ಮೂಲಕ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗುವ ರಾಜ್ಯ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು. ವಿಶೇಷ ಗ್ರಾಮ ಸಭೆಗಳಲ್ಲಿ ಪರಿಶೀಲನೆಗೊಂಡು ಧೃಡಗೊಂಡ ಮತದಾರರಿಗೆ ಅವರ ದಾಖಲೆಗಳ ಸಮೇತ ಸ್ಮಾರ್ಟ್ ಕಾರ್ಡ್ ನೀಡಬೇಕು. ದಾಖಲೆ ಇಲ್ಲದವರಿಗೆ ವಾಸ ಧೃಡೀಕರಣ ಪತ್ರ ವನ್ನು ತಕ್ಷಣವೇ ವಿತರಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ಮತದಾರರ ನೆರವು ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಲಾಗಿದೆ.

ನಮ್ಮ ಈ ಮೇಲಿನ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿಲಾಗಿದೆ.

ಈ ಸಂದರ್ಭದಲ್ಲಿ ಬಸವರಾಜ್ ಜಾಬಶೆಟ್ಟಿ, ಮಾರುತಿ ಬೌದ್ಧೆ, ಓಂಪ್ರಕಾಶ್ ರೊಟ್ಟೆ, ಮಹೇಶ್ ಗೊರನಾಳಕರ್, ಬಾಬುರಾವ್ ಹೊನ್ನಾ, ನಿಜಾಮುದ್ದೀನ್, ಅಮೃತರಾವ್ ಚಿಮಕೋಡೆ, ಜಗದೀಶ್ವರ್ ಬಿರಾದಾರ್, ಗೋಪಾಲ್ ಸಿಂಗ್ ಠಾಕೂರ್, ವಿನಯಕುಮಾರ್ ಮಾಳಗೆ, ಸಿದ್ದಪ್ಪ ಫುಲಾರಿ, ಹಣಮಂತ್ ಮಟ್ಟೆ, ಮಹ್ಮದ್ ಆಶಿಫುದ್ದೀನ್, ರಝಿಯಾ ಬಳಬಟ್ಟಿ, ಮುಬಸೀರ್ ಸಿಂಧೆ,

ಅಸ್ಮಾ ಸುಲ್ತಾನಾ, ಭೀಮ್ ಸಂಗಮ, ವಿಜಯಕುಮಾರ್, ಫಿರಾಸತ್ ಅಲಿ, ಮೌಲಾನಾ ಅಬ್ದುಲ್ ಗಫ್ಫಾರ್, ದುರ್ಗಪ್ಪ ಹಾಗೂ ರಾಮಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.





Tags

BidarSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X