Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್ಐಆರ್ ನಲ್ಲಿನ ತೊಡಕು...

Bidar | ಎಸ್ಐಆರ್ ನಲ್ಲಿನ ತೊಡಕು ನಿವಾರಣೆಗೆ ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ17 July 2026 3:08 PM IST
share
Bidar | ಎಸ್ಐಆರ್ ನಲ್ಲಿನ ತೊಡಕು ನಿವಾರಣೆಗೆ ಆಗ್ರಹಿಸಿ ಮನವಿ
ಸೋನ್ಂ ವಾಂಗ್ಚುಕ್ ಅವರ ಪ್ರತಿಭಟನೆಯಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಲು ಒತ್ತಾಯ

ಬೀದರ್: ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಿ ಪರಿಷ್ಕರಣೆ ಅವಧಿಯನ್ನು ಒಂದು ತಿಂಗಳವರೆಗೆ ವಿಸ್ತರಿಸಬೇಕು ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹದ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯು ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಪ್ರತ್ಯೇಕ ಮನವಿಗಳನ್ನು ಸಲ್ಲಿಸಿತು.

ಕೇಂದ್ರ ಮತ್ತು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಉದ್ಯೋಗ ನಿಮಿತ್ತ ವಲಸೆ ಹೋದ ಅನೇಕ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪರಿಷ್ಕರಣೆ ಅವಧಿಯನ್ನು ಕೇವಲ 10 ದಿನಗಳ ಬದಲು ಒಂದು ತಿಂಗಳವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಲಾಗಿದೆ.

ಇದಲ್ಲದೆ, ಬಡವರು ಮತ್ತು ಮಹಿಳೆಯರ ಬಳಿ ಅಗತ್ಯ ದಾಖಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಡ್ರೈವಿಂಗ್ ಲೈಸೆನ್ಸ್‌ಗಳನ್ನೂ ಮತದಾರರ ಪುರಾವೆಯಾಗಿ ಪರಿಗಣಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದು ಮನವಿಯನ್ನು ರಾಷ್ಟ್ರಪತಿಗೆ ಸಲ್ಲಿಸಿರುವ ಸಮಿತಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಲೋಪದೋಷಗಳನ್ನು ಖಂಡಿಸಿ ಜಂತರ್‌ ಮಂತರ್‌ನಲ್ಲಿ ಕಳೆದ 19 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಡುತ್ತಿರುವುದರಿಂದ, ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಅವರ ಬೇಡಿಕೆಗಳಿಗೆ ಸ್ಪಂದಿಸುವಂತೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಶ್ರೀಕಾಂತ್ ಸ್ವಾಮಿ, ನಿಜಾಮೋದ್ದಿನ್, ಬಾಬುರಾವ್ ಹೊನ್ನಾ, ಜಗದೀಶ್ವರ್ ಬಿರಾದಾರ್, ಡಾ. ಮಕ್ಸುದಾ ಚಂದಾ, ವಿನಯ್ ಮಾಳಗೆ, ಮಹೇಶ್ ಗೋರನಾಳಕರ್, ರಜಿಯಾ ಬಳಬಟ್ಟೆ, ಸಂದೀಪ್ ಮುಕಿಂದೆ ಹಾಗೂ ಮಚಿಂದ್ರ ವಾಘಮಾರೆ ಸೇರಿದಂತೆ ಇತರರು ಇದ್ದರು.

Tags

SIRBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X