Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕನಿಷ್ಠ ವೇತನ, ಉದ್ಯೋಗ...

Bidar | ಕನಿಷ್ಠ ವೇತನ, ಉದ್ಯೋಗ ಭದ್ರತೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರ ಧರಣಿ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ18 Nov 2026 7:58 PM IST
share
Bidar | ಕನಿಷ್ಠ ವೇತನ, ಉದ್ಯೋಗ ಭದ್ರತೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರ ಧರಣಿ

ಬೀದರ್: ಅಕ್ಷರ ದಾಸೋಹ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಸಂಘಟನೆಯ ವತಿಯಿಂದ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಪ್ರವಾಸಿ ಮಂದಿರದ ಎದುರು ನೂರಾರು ಕಾರ್ಯಕರ್ತೆಯರು ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ, ಕಡಿಮೆ ಮಕ್ಕಳ ಹಾಜರಾತಿ ಇರುವ ಶಾಲೆಗಳ ಅಡುಗೆಯವರನ್ನು ಕೆಲಸದಿಂದ ಬಿಡುಗಡೆ ಮಾಡದೆ, ನಿವೃತ್ತಿವರೆಗೆ ಮುಂದುವರಿಸಬೇಕು. ಬಿಸಿಯೂಟ ಕಾರ್ಯಕರ್ತೆಯರನ್ನು ಕನಿಷ್ಠ ವೇತನ ಕಾಯ್ದೆಯಡಿ ಒಳಪಡಿಸಿ, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕನಿಷ್ಠ 22 ಸಾವಿರ ರೂ. ವೇತನ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಮೊಟ್ಟೆ ಸುಲಿಯುವ ಅಡುಗೆಯವರಿಗೆ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಿ ಹಣ ಪಾವತಿಸಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸಬೇಕು. ನಿವೃತ್ತಿಯಾಗುವ ಅಡುಗೆಯವರಿಗೆ 40 ಸಾವಿರ ರೂ. ಇಡುಗಂಟು ನೀಡುವುದಾಗಿ ಘೋಷಿಸಿ ಎರಡು-ಮೂರು ವರ್ಷಗಳು ಕಳೆದರೂ ಈವರೆಗೆ ಹಣ ಪಾವತಿಸಿಲ್ಲ. ಆದ್ದರಿಂದ ಈಗಾಗಲೇ ನಿವೃತ್ತರಾದ ಅಡುಗೆಯವರಿಗೆ ಇಡುಗಂಟು ಒದಗಿಸಬೇಕು. ಇಡುಗಂಟಿನ ಮೊತ್ತವನ್ನು 2 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಡುಗೆಯವರನ್ನು ಭವಿಷ್ಯನಿಧಿ (ಪಿಎಫ್) ಮತ್ತು ಇಎಸ್‌ಐ ವ್ಯಾಪ್ತಿಗೆ ತಂದು ಉದ್ಯೋಗ ಭದ್ರತೆ ಒದಗಿಸಬೇಕು. ಕಾರ್ಯಕರ್ತೆಯರ ಸೇವಾ ಭದ್ರತೆ ಹಾಗೂ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಧರಣಿಯಲ್ಲಿ ಎಐಟಿಯುಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ತಂಗೆಮ್ಮ ಹೊಸಮನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾನಂದಾ ಸಾಫೆ, ಜಿಲ್ಲಾ ಗೌರವಾಧ್ಯಕ್ಷೆ ಶ್ರೀದೇವಿ, ಜಿಲ್ಲಾಧ್ಯಕ್ಷ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಮುಗನೂರೆ, ಜಿಲ್ಲಾ ಖಜಾಂಚಿ ವಿಜಯಲಕ್ಷ್ಮಿ, ವಿಲ್ಸನ್ ಹಲಗೆ, ಮಹಾದೇವಿ ಬಗದಲ್, ಅನಿತಾ ಸ್ವಾಮಿ, ಗೋದಾವರಿ ಆಣದುರ್, ಕವಿತಾ, ರಾಜಕುಮಾರ್ ದಪ್ಪೆ, ದಯಾನಂದ್, ಲಾಲಪ್ಪ ನಿರ್ಣಾ, ಪ್ರಭಾವತಿ ಮೀನಕೇರಾ, ಬಸವರಾಜ್ ನಿರ್ಣಾ ಹಾಗೂ ರೇಣುಕಾ ಜಂಬಗಿ ಸೇರಿದಂತೆ ನೂರಾರು ಬಿಸಿಯೂಟ ಕಾರ್ಯಕರ್ತೆಯರು ಭಾಗವಹಿಸಿದ್ದರು.

Tags

Bidarprotest
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X