ಬೀದರ್ | ಅಪ್ರಾಪ್ತನಿಂದ ವಾಹನ ಚಾಲನೆ : ಮಾಲಕನಿಗೆ 25 ಸಾವಿರ ರೂ. ದಂಡ

ಸಾಂದರ್ಭಿಕ ಚಿತ್ರ
ಬೀದರ್ : ಅಪ್ರಾಪ್ತ ವಯಸ್ಸಿನ ಬಾಲಕನು ವಾಹನ ಚಾಲನೆ ಮಾಡಿದಕ್ಕೆ ಆತನ ಪೋಷಕರಿಗೆ ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು 25 ಸಾವಿರ ರೂ. ದಂಡ ವಿಧಿಸಿದೆ.
ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನು ವಾಹನ ಚಾಲನೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಸಿಪಿಐ ಅಲಿಸಾಬ್ ಅವರು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತ ವಯಸ್ಸಿನ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
Next Story





