Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಶಿಕ್ಷಣ ಇಲಾಖೆಯ ಅವ್ಯವಸ್ಥೆ,...

ಬೀದರ್ | ಶಿಕ್ಷಣ ಇಲಾಖೆಯ ಅವ್ಯವಸ್ಥೆ, ನೀರಿನ ಸಮಸ್ಯೆ ಬಗ್ಗೆ ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 April 2025 7:32 PM IST
share
ಬೀದರ್ | ಶಿಕ್ಷಣ ಇಲಾಖೆಯ ಅವ್ಯವಸ್ಥೆ, ನೀರಿನ ಸಮಸ್ಯೆ ಬಗ್ಗೆ ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ

ಬೀದರ್ : ಶಿಕ್ಷಕರಿರುವ ಕಡೆ ಮಕ್ಕಳಿಲ್ಲ, ಮಕ್ಕಳಿರುವ ಕಡೆ ಶಿಕ್ಷಕರಿಲ್ಲ. ಬಹಳಷ್ಟು ತಾಂಡಾಗಳಿಗೆ ಶಿಕ್ಷಕರು ಹೋಗುವುದೇ ಇಲ್ಲ. ಇಂತಹ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಔರಾದ್ (ಬಿ) ತಾಲ್ಲೂಕು ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾನು ಕ್ಷೇತ್ರದೆಲ್ಲೆಡೆ ಸಂಚಾರ ನಡೆಸಿ ಪ್ರತಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಕಣ್ಣಾರೆ ವೀಕ್ಷಿಸಿದ್ದೇನೆ. ನನ್ನ ಜೊತೆಗೆ ಅಧಿಕಾರಿಗಳು ಕೂಡ ಇದ್ದರು. ಸರ್ಕಾರಿ ಶಾಲೆಗಳು ಸಮಸ್ಯೆಗಳ ಆಗರಗಳಾಗಿವೆ. ಶಿಕ್ಷಕರು ಬೋಧನೆಗಿಂತ ಹೆಚ್ಚು ರಾಜಕೀಯದಲ್ಲಿ ತೊಡಗಿದ್ದಾರೆ. ಹೀಗಾದರೆ ಶಿಕ್ಷಣದ ಪರಿಸ್ಥಿತಿ ಏನಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಅಧಿಕಾರಿಗಳು ಶಿಕ್ಷಣ ಇಲಾಖೆ ಸುಧಾರಿಸಲು ಪ್ರಥಮ ಆದ್ಯತೆ ನೀಡಬೇಕು. ಶಿಕ್ಷಕರ ತಾರತಮ್ಯ ಸರಿಪಡಿಸಿ ಫಲಿತಾಂಶ ಸುಧಾರಣೆಗೆ ಒತ್ತು ನೀಡಬೇಕು. ಎಲ್ಲ ಶಿಕ್ಷಕರು ತಪ್ಪದೇ ಶಾಲೆಗೆ ಹೋಗಿ ಪಾಠ ಮಾಡಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸುವಂತೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಉದ್ಯಾನ, ಕಾಂಪೌಂಡ್ ಗೋಡೆ ನಿರ್ಮಿಸಬೇಕು ಹಲವಾರು ಸಲ ಹೇಳಿದ್ದೇನೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ನಾನು ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದು, ಶಾಲಾ, ಕಾಲೇಜುಗಳ ನಿರ್ಮಾಣ, ಮೂಲಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇಲಾಖೆಯ ಎಲ್ಲ ಅಗತ್ಯತೆಗಳನ್ನು ಪೂರೈಸುತ್ತಿದ್ದೇನೆ. ಅದಕ್ಕೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಕೃಷಿ ಇಲಾಖೆಯಿಂದ ರೈತರಿಗೆ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಕಚೇರಿಯಲ್ಲಿನ ಹೊರಗುತ್ತಿಗೆ ಸಿಬ್ಬಂದಿಯಿಂದಲೇ ಅವ್ಯವಹಾರ ನಡೆಯುತ್ತಿವೆ ಮತ್ತು ತಮಗೆ ಬೇಕಾದವರಿಗೆ ಮಾತ್ರ ಸೌಲಭ್ಯಗಳು ಸಿಗುವಂತೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿವೆ. ಇಂಥ ಸಮಸ್ಯೆಗಳು ಕೂಡಲೇ ಸರಿಪಡಿಸಬೇಕು ಎಂದು ತಾಲ್ಲೂಕು ಕೃಷಿ ಅಧಿಕಾರಿ ಅವರಿಗೆ ಸೂಚಿಸಿದರು.

ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತಾಪ ಹೆಚ್ಚುತ್ತಿದೆ. ಔರಾದ(ಬಿ) ಹಾಗೂ ಕಮಲನಗರ್ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಮಹಿಳೆಯರು ಕೊಡಗಳು ಹಿಡಿದು ಬೀದಿ ಬೀದಿ ಅಲೆಯುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಜಲ ಜೀವನ್ ಮಿಷನ್ ಪೂರ್ಣಗೊಂಡ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ವೈಫಲ್ಯದಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಬಾವಿ ನಿರ್ಮಿಸಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ನಿಯಮಗಳೆಲ್ಲವನ್ನು ಗಾಳಿಗೆ ತೂರಿ ಮನಬಂದಂತೆ ಕ್ರಿಯಾಯೋಜನೆ ರೂಪಿಸಿದ್ದಾರೆ. ಇಂತಹ ಸಮಸ್ಯೆಗಳಿಂದ ಯೋಜನೆ ವಿಫಲಗೊಂಡಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಇಓ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಎಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಔರಾದ(ಬಿ) ತಹಸೀಲ್ದಾರ್ ಮಹೇಶ್ ಪಾಟೀಲ್, ಕಮಲನಗರ್ ತಹಸೀಲ್ದಾರ್ ಅಮಿತಕುಮಾರ್ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ್, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಹಾಗೂ ಶಿವಕುಮಾರ್ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X