Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ಮಾಂಜ್ರಾ ನದಿಗೆ ನೀರು ಹರಿಸಲು...

ಬೀದರ್‌ | ಮಾಂಜ್ರಾ ನದಿಗೆ ನೀರು ಹರಿಸಲು ಶಾಸಕ ಪ್ರಭು ಚವ್ಹಾಣ್‌ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Oct 2026 6:59 PM IST
share
ಬೀದರ್‌ | ಮಾಂಜ್ರಾ ನದಿಗೆ ನೀರು ಹರಿಸಲು ಶಾಸಕ ಪ್ರಭು ಚವ್ಹಾಣ್‌ ಸೂಚನೆ

ಔರಾದ್ : ಮಾಂಜ್ರಾ ನದಿ ಬತ್ತಿ ಹೋಗಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ಅಗತ್ಯ ಪ್ರಮಾಣದ ನೀರು ಹರಿಸುವಂತೆ ಶಾಸಕ ಪ್ರಭು ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ಮಾಂಜ್ರಾ ನದಿ ಬತ್ತಿ ಹೋಗಿದೆ. ಹಾಲಹಳ್ಳಿಯಿಂದ ಔರಾದ್‌ ಪಟ್ಟಣಕ್ಕೆ ಅಗುವ ನೀರು ಸರಬರಾಜಿನಲ್ಲಿಯೂ ವ್ಯತ್ಯಯ ಉಂಟಾಗಿದ್ದು, ಎಲ್ಲ ವಾರ್ಡ್‌ಗಳಿಂದ ನಿರಂತರ ದೂರುಗಳು ಬರುತ್ತಿವೆ. ಜೊತೆಗೆ ನದಿ ವ್ಯಾಪ್ತಿಯ ಬಹಳಷ್ಟು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಜನ-ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹಾಗಾಗಿ ತುರ್ತಾಗಿ ನದಿಗೆ ನೀರು ಹರಿಸಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಅನುಕೂಲ ಮಾಡಿಕೊಡುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಮಳೆ ಕೊರತೆಯಿಂದಾಗಿ ಈ ಬಾರಿ ಬೇಸಿಗೆ ಕಾಲದ ಮುನ್ನವೇ ಬರ ಪರಿಸ್ಥಿತಿ ಉಂಟಾಗಿದ್ದು, ಸಾಕಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ‌. ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ನೀಡಿದಾಗ ನಿರ್ಲಕ್ಷ್ಯ ಮಾಡದೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪಿಡಿಓಗಳ ಕಾರ್ಯವೈಖರಿಯನ್ನು ಪರಿಶೀಲಿಸುವುದರ ಜೊತೆಗೆ ಗ್ರಾಮಗಳಲ್ಲಿ ನೀರು ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಜೆಜೆಎಂ ಯೋಜನೆ ನಿರೀಕ್ಷೆಗೆ ತಕ್ಕಂತೆ‌ ಆಗದ ಹಿನ್ನೆಲೆಯಲ್ಲಿ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವುದು ಕಂಡು ಬಂದಿದೆ. ಅಧಿಕಾರಿಗಳು ಸಮಸ್ಯೆ ಇರುವ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ, ನೀರು ಪೂರೈಕೆಯಲ್ಲಿನ ಅಡಚಣೆಗಳನ್ನು ಪರಿಶೀಲಿಸಿ, ತಕ್ಷಣ ಪರಿಹಾರ ಕಲ್ಪಿಸಬೇಕು. ಕೇವಲ ಕಚೇರಿಯಲ್ಲಿ ಕುಳಿತುಕೊಳ್ಳದೆ, ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಬರ ಪರಿಸ್ಥಿತಿಯಿಂದ ಈಗಾಗಲೇ ರೈತರು ಹಾಗೂ ಗ್ರಾಮೀಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ತೊಂದರೆ ಉಂಟು ಮಾಡಬಾರದು. ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು. ಕುಡಿಯುವ ನೀರಿನ ವಿಷಯದಲ್ಲಿ ಜನರಿಗೆ ತೊಂದರೆಯಾದರೆ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

Tags

BidarMLAPrabhu ChavanManjra river
share
ವಾರ್ತಾಭಾರತಿ
ವಾರ್ತಾಭಾರತಿ
Next Story
X