Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಬಳಿಸಿದ ಸರಕಾರಿ ಭೂಮಿ...

Bidar | ಕಬಳಿಸಿದ ಸರಕಾರಿ ಭೂಮಿ ಮರಳಿಸಿದರೆ ಶಾಸಕ ಪ್ರಭು ಚವ್ಹಾಣ್‌ಗೆ ಭವ್ಯ ಸನ್ಮಾನ: ದೀಪಕ್ ಪಾಟೀಲ್

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ28 Nov 2026 6:34 PM IST
share
Bidar | ಕಬಳಿಸಿದ ಸರಕಾರಿ ಭೂಮಿ ಮರಳಿಸಿದರೆ ಶಾಸಕ ಪ್ರಭು ಚವ್ಹಾಣ್‌ಗೆ ಭವ್ಯ ಸನ್ಮಾನ: ದೀಪಕ್ ಪಾಟೀಲ್

ಬೀದರ್: ಕಬಳಿಸಿರುವ ಸರ್ಕಾರಿ ಭೂಮಿಯನ್ನು ಸರ್ಕಾರಕ್ಕೆ ಮರಳಿಸಿದರೆ ಬೀದರ್ ರಂಗಮಂದಿರದಲ್ಲಿ ಭವ್ಯ ಸಮಾರಂಭ ಆಯೋಜಿಸಿ ಔರಾದ್ ಶಾಸಕ ಪ್ರಭು ಚವ್ಹಾಣ್ ಅವರನ್ನು ಸನ್ಮಾನಿಸಲಾಗುವುದು ಎಂದು ಚಾಂದೋರಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಚಾಂದೋರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಭು ಚವ್ಹಾಣ್ ಅವರ ಬಗ್ಗೆ ತಮಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಸರ್ಕಾರಿ ಆಸ್ತಿಯನ್ನು ಉಳಿಸುವ ಉದ್ದೇಶದಿಂದ ಹೋರಾಟ ನಡೆಸುತ್ತಿದ್ದೇನೆ. ಸುಜಿತ್ ರಾಠೋಡ್ ಹೇಳಿದಂತೆ ಔರಾದ್ ಶಾಸಕರು ಭೂದಾನಿಗಳಾಗಿದ್ದರೆ, ಅವರು ಕಬಳಿಸಿದ್ದಾರೆ ಎನ್ನಲಾದ ಬೀದರ್ ತಾಲ್ಲೂಕಿನ ಕೊಳಾರ್ (ಬಿ) ಗ್ರಾಮದ ಸರ್ವೇ ಸಂಖ್ಯೆ 102ರಲ್ಲಿರುವ 3 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ಸರ್ಕಾರಕ್ಕೆ ಮರಳಿಸಿ ಔದಾರ್ಯ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪದಡಿ ಶಾಸಕರ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ನ್ಯಾಯಾಲಯ ಶಾಸಕರಿಗೆ ನೋಟಿಸ್ ನೀಡಿ ಉತ್ತರಿಸುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಮೂಗು ತೋರಿಸಲು ಸುಜಿತ್ ರಾಠೋಡ್ ಯಾರು? ಶಾಸಕರು ಕಬಳಿಸಿದ್ದಾರೆ ಎನ್ನಲಾದ ಭೂಮಿಯಲ್ಲಿ ಅವರ ಪಾಲುದಾರಿಕೆ ಇದೆಯೇ ಅಥವಾ ಹಣದ ಆಸೆಗಾಗಿ ಮಿಥ್ಯ ಹೇಳಿಕೆ ನೀಡುತ್ತಿದ್ದಾರೆಯೇ ಎಂದು ದೀಪಕ್ ಪಾಟೀಲ್ ಪ್ರಶ್ನಿಸಿದ್ದಾರೆ.

ಪ್ರಭು ಚವ್ಹಾಣ್ ಶಾಸಕರಾಗಿದ್ದ ಅವಧಿಯಲ್ಲಿಯೇ ಕೊಳಾರ್ (ಬಿ) ಬಳಿಯ ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದಾರೆ ಎಂದು ಆರೋಪಿಸಿರುವ ಅವರು, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಚ್.ಆರ್. ಮಹಾದೇವ್ ಅವರು ಸದರಿ ಜಮೀನು ಸರ್ಕಾರಕ್ಕೆ ಸೇರಿದ್ದಾಗಿದೆ ಎಂದು ವರದಿ ಸಲ್ಲಿಸಿದ್ದರು. ಹಾಗಾದರೆ ಜಿಲ್ಲಾಡಳಿತದ ವರದಿ ತಪ್ಪಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮಾನಹಾನಿ ಮೊಕದ್ದಮೆ ಹೂಡುವ ಎಚ್ಚರಿಕೆಗೆ ಹೆದರುವುದಿಲ್ಲ. ದಾಖಲೆಗಳ ಆಧಾರದಲ್ಲಿಯೇ ದೂರು ಸಲ್ಲಿಸಿದ್ದೇನೆ. ಮಾನಹಾನಿ ಮೊಕದ್ದಮೆ ಹೂಡುವುದಾದರೆ ಮೊದಲು ಹೂಡಲಿ ಎಂದು ಅವರು ಹೇಳಿದ್ದಾರೆ.

ಶಾಸಕ ಪ್ರಭು ಚವ್ಹಾಣ್ ಅವರು 3 ಎಕರೆ ಜಮೀನನ್ನು ದಾನ ಮಾಡಿದ್ದಾರೆ ಎಂದು ಸುಜಿತ್ ರಾಠೋಡ್ ಹೇಳಿಕೆ ನೀಡಿದ್ದಾರೆ. ಶಾಸಕರಿಗೆ ಪೂರ್ವಜರಿಂದ ಬಂದಿರುವುದು ಕೇವಲ 3 ಎಕರೆ ಜಮೀನು ಮಾತ್ರ. ಅವರು ಭೂದಾನಿಗಳಾಗಿದ್ದರೆ, ಪ್ರಸ್ತುತ ಅವರ ಬಳಿ ಇರುವ ನೂರಾರು ಎಕರೆ ಜಮೀನು ಹೇಗೆ ಬಂತು? ಅದು ಅಕ್ರಮ ಮಾರ್ಗದಿಂದ ಬಂದಿದೆಯೇ? ಖಾತೆಯಿಂದ ಖಾತೆಗೆ ಹಣ ವರ್ಗಾವಣೆಯಾಗಿರುವುದು ದೃಢಪಟ್ಟಿದ್ದರೂ ಸತ್ಯಹರಿಶ್ಚಂದ್ರರಂತೆ ಮಾತನಾಡುತ್ತಿರುವುದೇಕೆ ಎಂದು ದೀಪಕ್ ಪಾಟೀಲ್ ಪ್ರಶ್ನಿಸಿದ್ದಾರೆ.

ಸ್ವಂತ ಹಾಗೂ ಮಕ್ಕಳ ಹೆಸರು ಬದಲಾವಣೆ ಮಾಡಿಕೊಂಡಿರುವುದನ್ನು ಕೇಳಿದ್ದೇವೆ. ಆದರೆ, ತಂದೆಯ ಹೆಸರನ್ನೇ ಬದಲಾಯಿಸಿಕೊಂಡ ದೇಶದ ಮೊದಲ ಶಾಸಕ ಪ್ರಭು ಚವ್ಹಾಣ್ ಎಂದು ಅವರು ಆರೋಪಿಸಿದ್ದಾರೆ. ಶಾಸಕರು ತಮ್ಮ ತಂದೆಯ ಹೆಸರನ್ನು ಬದಲಾಯಿಸಿಕೊಂಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇವೆ. ತಂದೆಯ ಹೆಸರನ್ನು ಬದಲಾಯಿಸಿಕೊಂಡಿಲ್ಲ ಎಂದಾದರೆ ಶಾಸಕರು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಶಾಸಕರು ಈ ವಿಚಾರವಾಗಿ ನೇರವಾಗಿ ಸ್ಪಷ್ಟನೆ ನೀಡಬೇಕು. ಪ್ರಕರಣಕ್ಕೆ ಸಂಬಂಧವಿಲ್ಲದವರು ಇದರಲ್ಲಿ ಮೂಗು ತೂರಿಸುವ ಅಗತ್ಯವಿಲ್ಲ ಎಂದು ದೀಪಕ್ ಪಾಟೀಲ್ ಎಚ್ಚರಿಸಿದ್ದಾರೆ.

Tags

BidarPrabhu ChavanGovernment Land
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X