ಬೀದರ್ | ತೊಗಲೂರಿನಲ್ಲಿ ಸಮುದಾಯ ಭವನಕ್ಕೆ ಶಾಸಕ ಶರಣು ಸಲಗರ್ ಶಂಕುಸ್ಥಾಪನೆ

ಹುಲಸೂರ್ : ಕೆಕೆಆರ್‌ಡಿಬಿ ಅನುದಾನದಡಿಯಲ್ಲಿ ತಾಲೂಕಿನ ತೊಗಲೂರ್ ಗ್ರಾಮದ ವಿಠಲ್-ರುಕ್ಮಿಣಿ ದೇವಸ್ಥಾನದ ಸಮೀಪ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮುದಾಯ ಭವನದ ಕಾಮಗಾರಿಗೆ ಶಾಸಕ ಶರಣು ಸಲಗರ್ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಗ್ರಾಮದ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
ಈ ವೇಳೆ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕುಡಿಯುವ ನೀರು, ರಸ್ತೆ ಹಾಗೂ ಚರಂಡಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಅವರು, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಅಧಿಕಾರಿಗಳ ಮೂಲಕ ಪರಿಹರಿಸಿದರು. ಉಳಿದ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Next Story




