Bidar | ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಅವರಿಂದ ಸ್ಥಳ ಪರಿಶೀಲನೆ

ಬೀದರ್: ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಹೈವೇ, ರೈಲ್ವೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಮಗ್ರವಾಗಿ ಚರ್ಚಿಸಿದ ಸಂಸದರು, ಯೋಜನೆಯ ಸಾಧ್ಯತೆಗಳು, ತಾಂತ್ರಿಕ ಅಂಶಗಳು ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದರು.
ಬಳಿಕ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಯ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಮಾಹಿತಿ ಪಡೆದರು. ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.




