ಬೀದರ್ | ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ ಮುಕುಲ್ ಜೈನ್ ವರ್ಗಾವಣೆ

ಬೀದರ್ : ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆಗೊಳಿಸಿ, ಬೀದರ್ ಮಹಾನಗರ ಪಾಲಿಕೆಯ ಆಯುಕ್ತರಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಇತ್ತೀಚಿಗೆ ಬೀದರ್ ನಗರ ನಿಗಮದ ಪ್ರಭಾರಿ ಆಯುಕ್ತರಾಗಿ ರಮ್ಯ ಅವರು ಅಧಿಕಾರ ವಹಿಸಿಕೊಂಡಿದ್ದರು. ಸೋಮವಾರ ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ಈ ಸ್ಥಳಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
Next Story





