ಬೀದರ್ | ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ, ಪರಿಶೀಲನೆ

ಬೀದರ್ : ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇಂದು ಜಿಲ್ಲೆಯ ಕಮಠಾಣ, ಬಗದಲ್, ಗೋಧಿ ಹಿಪ್ಪರಗಾ ಹಾಗೂ ಮುಡಬಿ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇಂದು ನಡೆಯುವ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಹಾಗೂ ಸಹಾಯಕ ಆಯುಕ್ತರು, ತಹಶೀಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





