Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಸತಿ ವ್ಯವಸ್ಥೆಗಾಗಿ...

Bidar | ವಸತಿ ವ್ಯವಸ್ಥೆಗಾಗಿ ಅಲೆಮಾರಿಗಳಿಂದ ಸಂಸದ ಸಾಗರ್‌ ಖಂಡ್ರೆ ಅವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 July 2026 7:19 PM IST
share
Bidar | ವಸತಿ ವ್ಯವಸ್ಥೆಗಾಗಿ ಅಲೆಮಾರಿಗಳಿಂದ ಸಂಸದ ಸಾಗರ್‌ ಖಂಡ್ರೆ ಅವರಿಗೆ ಮನವಿ
ಪೊಲೀಸರ ವರ್ತನೆ ವಿರುದ್ಧ ಆಕ್ರೋಶ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಬೀದರ್: ನಗರದ ನೌಬಾದ್‌ನ ಚೌಳಿಕಮಾನ ಸಮೀಪ ಕಳೆದ 20–30 ವರ್ಷಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯದ ಜನರು ತಮಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಂಸದ ಸಾಗರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ನಡೆದ ದಿಶಾ ಸಭೆಗೆ ಆಗಮಿಸಿದ್ದ ಸಂಸದರಿಗೆ ಸಲ್ಲಿಸಿದ ಮನವಿಯಲ್ಲಿ, ಸರ್ಕಾರಿ ಜಮೀನಿನ ಕಾಲುವೆ ಬದಿಯಲ್ಲಿ ಸುಮಾರು 25 ವರ್ಷಗಳಿಂದ ವಾಸಿಸುತ್ತಿದ್ದು, ಸುತ್ತಮುತ್ತಲಿನ ಶ್ರೀಮಂತ ನಿವಾಸಿಗಳಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದೇವೆ. ಬಾಗೆ ಕಾರಂಜಾ (ಬೆಚಿರಾಕ್) ಪ್ರದೇಶದ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ನೆಲೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮೂಲಭೂತ ಸೌಕರ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಎದುರಾಗಿದ್ದು, ಮಹಿಳೆಯರು ಬಯಲು ಶೌಚಕ್ಕೆ ತೆರಳಿದಾಗ ಕಿರುಕುಳ ಹಾಗೂ ಹಲ್ಲೆ ನಡೆಯುತ್ತಿದೆ. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ನಮಗೆ ಮಾನವೀಯ ಬದುಕಿನ ಹಕ್ಕು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಗೆ ಕಾರಂಜಾ ಪ್ರದೇಶದಲ್ಲಿರುವ ನಾಲ್ಕು ಎಕರೆ ಸರ್ಕಾರಿ ಜಮೀನನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಳ್ಳಲು ಅವಕಾಶ ನೀಡಬೇಕು. ಜೊತೆಗೆ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ವರ್ತನೆಗೆ ಆಕ್ರೋಶ :

ಮನವಿ ಸಲ್ಲಿಸಲು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕಾಯುತ್ತಿದ್ದ ಅಲೆಮಾರಿ ಸಮುದಾಯದ ಜನರನ್ನು ಹೊರಹೋಗುವಂತೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪುಜಾರಿ ಗದರಿಸಿ, ಲಾಠಿ ಚಾರ್ಜ್ ಮಾಡುವ ಮುನ್ನವೇ ತೆರಳುವಂತೆ ಎಚ್ಚರಿಕೆ ನೀಡಿ ಕೆಲವರನ್ನು ತಳ್ಳಿದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸ್ಥಳಕ್ಕೆ ಆಗಮಿಸಿ ಅಲೆಮಾರಿ ಜನರ ಸಮಸ್ಯೆ ಆಲಿಸಿದರು. ಬಳಿಕ ಸಂಸದ ಸಾಗರ್ ಖಂಡ್ರೆ ಸಭೆಯಿಂದ ಹೊರಬಂದು ಮನವಿ ಸ್ವೀಕರಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಉಪವಾಸ ಸತ್ಯಾಗ್ರಹದ ಎಚ್ಚರಿಕೆ :

ತಕ್ಷಣವೇ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸದಿದ್ದರೆ ಜುಲೈ 20ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ವಿಶ್ವ ಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಎಚ್ಚರಿಕೆ ನೀಡಿದ್ದಾರೆ.

Tags

Sagar KhandreBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X