Bidar | ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಓಂಕಾಂತ್ ಸೂರ್ಯವಂಶಿ ಆಯ್ಕೆ

ಬೀದರ್: ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯಲ್ಲಿ ಓಂಕಾಂತ್ ಸೂರ್ಯವಂಶಿ ಅವರನ್ನು ಜಿಲ್ಲಾಧ್ಯಕ್ಷರಾಗಿ ಹಾಗೂ ಸುಖದೇವ್ ಬಿರಾದಾರ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪ್ರಾಂಶುಪಾಲರ ಸಂಘದ ಕಾರ್ಯಾಧ್ಯಕ್ಷ ಡಾ. ಮನ್ಮಥ್ ಡೋಳೆ ಹಾಗೂ ರಾಜ್ಯ ಪ್ರತಿನಿಧಿ ಬಾಲಾಜಿ ವಾಡೇಕರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಓಂಕಾಂತ್ ಸೂರ್ಯವಂಶಿ ಅವರು ಈಗಾಗಲೇ ಬೀದರ್ ಜಿಲ್ಲಾ ಉಪನ್ಯಾಸಕರ ಸಂಘದಲ್ಲಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಉಪನ್ಯಾಸಕರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಎಲ್ಲ ಪ್ರಾಂಶುಪಾಲರು ಸರ್ವಾನುಮತದಿಂದ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದರು.
ಸುಖದೇವ್ ಬಿರಾದಾರ್ ಅವರು ಭಾಲ್ಕಿ ತಾಲೂಕು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆ, ಅವರ ಕೊಡುಗೆಯನ್ನು ಪರಿಗಣಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಖಜಾಂಚಿ ಶಿವರಾಜ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಜೈಕಾಂತ್ ಗಂಗೋಜಿ ಹಾಗೂ ಬಸವಕಲ್ಯಾಣ ತಾಲೂಕಾಧ್ಯಕ್ಷ ಡಾ.ಜೈಶೇನಪ್ರಸಾದ್ ಹಾಗೂ ಇತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು.




