Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್‌ಐಆರ್ ಪ್ರಕ್ರಿಯೆ ಕುರಿತು...

Bidar | ಎಸ್‌ಐಆರ್ ಪ್ರಕ್ರಿಯೆ ಕುರಿತು ಮತದಾರರ ಸಮಸ್ಯೆಗಳ ಪರಿಹಾರಕ್ಕೆ ಕಾವಲು ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ15 July 2026 7:12 PM IST
share
Bidar | ಎಸ್‌ಐಆರ್ ಪ್ರಕ್ರಿಯೆ ಕುರಿತು ಮತದಾರರ ಸಮಸ್ಯೆಗಳ ಪರಿಹಾರಕ್ಕೆ ಕಾವಲು ಸಮಿತಿ ರಚನೆ

ಬೀದರ್‌ : ಎಸ್‌ಐಆರ್‌ (ವಿಶೇಷ ಸಮಗ್ರ ಪರಿಷ್ಕರಣೆ) ಅರ್ಜಿ ಸಲ್ಲಿಕೆಗೆ ಜು.29 ಕೊನೆಯ ದಿನವಾಗಿದ್ದು, ಆ.5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಅಗತ್ಯ ದಾಖಲೆಗಳ ಕೊರತೆಯಿಂದ ಅರ್ಜಿ ಸಲ್ಲಿಸಲು ತೊಂದರೆ ಅನುಭವಿಸುತ್ತಿರುವ ಅನಕ್ಷರಸ್ಥರು, ಬಡವರು ಹಾಗೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ‘ಕಾವಲು ಸಮಿತಿ’ ರಚಿಸಲು ಜಿಲ್ಲಾ ಮಟ್ಟದ ಎಸ್‌ಐಆರ್‌ ವಿರೋಧಿ ಜನಾಂದೋಲನ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯ ಪ್ರಗತಿ, ನ್ಯೂನತೆಗಳು ಹಾಗೂ ಮತದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

ಗ್ರಾಮೀಣ ಬೂತ್‌ಗಳು ಹಾಗೂ ನಗರ-ಪಟ್ಟಣಗಳ ವಾರ್ಡ್‌ಗಳಲ್ಲಿ ಮತದಾರರಿಗೆ ಎಸ್‌ಐಆರ್‌ ಅರ್ಜಿ ಭರ್ತಿ ಮಾಡಲು ಸಮಿತಿಯ ಸದಸ್ಯರು ನೆರವು ನೀಡಬೇಕು. ಅರ್ಜಿ ಸಲ್ಲಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಪರಿಹರಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

ಅಲ್ಲದೆ, ಮತದಾರರು ಅರ್ಜಿ ಭರ್ತಿಯ ವೇಳೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜು.17ರಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆ ತೀರ್ಮಾನಿಸಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಕಾಂತ್ ಸ್ವಾಮಿ ವಹಿಸಿದ್ದರು. ಸಂಚಾಲಕ ಓಂಪ್ರಕಾಶ್ ರೊಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ್ವರ್ ಬಿರಾದಾರ್ ಸಭೆಯ ನಡಾವಳಿಯನ್ನು ವಾಚಿಸಿದರು.

ಸಭೆಯಲ್ಲಿ ಡಾ.ಮಕ್ಸೂದ್ ಚಂದಾ, ಅಬ್ದುಲ್ ಮನ್ನಾನ್ ಸೇಠ್, ವಿಠಲದಾಸ್ ಪ್ಯಾಗೆ, ನಿಜಾಮುದ್ದೀನ್, ಬಾಲಾಜಿ ಕುಂಬಾರ್, ಸಂತೋಷ್ ಜೋಳದಾಬಕೆ, ಮಹೇಶ್ ಗೋರನಾಳಕರ್, ಸಿದ್ದು ಫುಲಾರಿ, ರಮೇಶ್ ಮಠಪತಿ, ಚೆನ್ನಬಸಯ್ಯ ಗಣಾಚಾರಿ, ಸಂದೀಪ್ ಮುಕುಂದೆ, ಮೊಹಮ್ಮದ್ ಫಯಾಜುದ್ದೀನ್, ಸುಂದರ್ ಜ್ಞಾನಿ, ಅಬ್ದುಲ್ ಸಮದ್,‌ ವಕೀಲ ಮೊಹಮ್ಮದ್ ಫಿರಾಸತ್ ಅಲಿ, ಅರುಣ್ ಪಟೇಲ್, ಡಾ. ಪೃಥ್ವಿರಾಜ್ ಹಾಗೂ ಜಯವಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

SIRBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X