ಬೀದರ್ | ಜು.15 ರಂದು ವಿದ್ಯುತ್ ವ್ಯತ್ಯಯ

ಬೀದರ್ : ಜೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ್ ನ ಕಾರ್ಯ ಮತ್ತು ಪಾಲನೆ ಉಪ ವಿಭಾಗದ 33 ಕೆ.ವಿ ಘಾಟಬೋರಾಳ ಮಾರ್ಗದಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹುಮನಾಬಾದ್ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಾಟಬೋರಾಳ್, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೀನ್ ಇನ್ಸುಲೇಟರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿದ್ದರಿಂದ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ಜು.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.
Next Story





