Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕನ್ನಡ ಭಾಷೆಯ ಸಂರಕ್ಷಣೆ...

Bidar | ಕನ್ನಡ ಭಾಷೆಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಸಂಜೀವಕುಮಾರ್ ಅತಿವಾಳೆ

ಕನ್ನಡ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Oct 2026 5:56 PM IST
share
Bidar | ಕನ್ನಡ ಭಾಷೆಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಸಂಜೀವಕುಮಾರ್ ಅತಿವಾಳೆ

ಬೀದರ್: ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಯುವಜನರು ಕನ್ನಡ ಭಾಷೆಯ ಮಹತ್ವ ಅರಿತು ದೈನಂದಿನ ಬದುಕಿನಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಭಾಷೆಯ ಮೇಲಿನ ಅಭಿಮಾನ ಕೇವಲ ಮಾತಿಗೆ ಸೀಮಿತವಾಗದೆ, ಅದರ ಬಳಕೆ ಹಾಗೂ ಬೆಳವಣಿಗೆಯ ಮೂಲಕ ವ್ಯಕ್ತವಾಗಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ್ ಅತಿವಾಳೆ ಹೇಳಿದರು.

ಬೀದರ್ ನಗರದ ಆದರ್ಶ ಐಟಿಐ ಕಾಲೇಜಿನಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಕನ್ನಡ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಗೆ ತನ್ನದೇ ಆದ ಶ್ರೀಮಂತ ಇತಿಹಾಸ, ಸಾಹಿತ್ಯಿಕ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವವಿದೆ. ಇಂತಹ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡದ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಗೌರವ ಹೊಂದುವುದು ಬಹಳ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಆತ್ಮನಂದ್ ಬಂಬುಳಗಿ ಮಾತನಾಡಿ, ಕನ್ನಡ ಜಾಗೃತಿ ಎನ್ನುವುದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಪ್ರೀತಿ, ಅಭಿಮಾನ ಹಾಗೂ ಗೌರವ ಬೆಳೆಸುವ ನಿರಂತರ ಪ್ರಯತ್ನ ನಡೆಯಬೇಕು. ಕನ್ನಡ ಭಾಷೆಯ ಬಳಕೆ ಹೆಚ್ಚಾದಾಗ ಮಾತ್ರ ಅದರ ಬೆಳವಣಿಗೆ ಸಾಧ್ಯ. ಮನೆ, ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ಜೀವನದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಮೂಲಕ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಸಾಹಿತಿ ಮಲ್ಲಿಕಾರ್ಜುನ್ ಮುರ್ಕೆ ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಭ್ಯಾಸ ಮಾಡುವುದರೊಂದಿಗೆ ನಾಡಿನ ಇತಿಹಾಸ ಹಾಗೂ ಮಹನೀಯರ ಜೀವನಾದರ್ಶಗಳನ್ನು ತಿಳಿದುಕೊಳ್ಳಬೇಕು. ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ನಾಡಿನ ಬಗ್ಗೆ ಅಭಿಮಾನ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಭೀಮಶಾ ಬಸಲಾಪೂರ್, ಹಿರಿಯ ಕಲಾವಿದೆ ಲಕ್ಷ್ಮೀ ಚಿದ್ರಿ, ಕಾಂಚನಾ, ಪದ್ಮಾವತಿ ಪಾಂಚಾಳ್, ಸಂತೋಷಕುಮಾರ್ ಹಾಗೂ ಲಕ್ಷ್ಮೀಬಾಯಿ ಸೇರಿದಂತೆ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು. ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ್ ಜೋಳದಾಪಕೆ ಸ್ವಾಗತಿಸಿದರು. ವಿಜಯಕುಮಾರ್ ಬ್ಯಾಲಹಳ್ಳಿ ನಿರೂಪಿಸಿದರು. ಶಿಕ್ಷಕಿ ಸುಜಾತಾ ವಂದಿಸಿದರು.

Tags

KannadaBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X