Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜನಪದ ಹಾಡುಗಳನ್ನು ಉಳಿಸಿ...

Bidar | ಜನಪದ ಹಾಡುಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ: ಶಂಕರ್ ಕಾಂಬ್ಳೆ

ವಾರ್ತಾಭಾರತಿವಾರ್ತಾಭಾರತಿ28 July 2026 7:12 PM IST
share
Bidar | ಜನಪದ ಹಾಡುಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ: ಶಂಕರ್ ಕಾಂಬ್ಳೆ

ಬೀದರ್: ಆಧುನಿಕ ಜೀವನಶೈಲಿಯ ಪ್ರಭಾವದಿಂದ ಜನಪದ ಹಾಡುಗಳು ನಿಧಾನವಾಗಿ ಮರೆಯಾಗುತ್ತಿದ್ದು, ಅವುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜನಪದ ಕಲಾವಿದ ಶಂಕರ್ ಕಾಂಬ್ಳೆ ಹೇಳಿದರು.

ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಏಕವ್ಯಕ್ತಿ ಜನಪದ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಪದ ಹಾಡುಗಳು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳ ಪ್ರತಿಬಿಂಬವಾಗಿವೆ. ಹಿರಿಯರು ತಮ್ಮ ಜೀವನಾನುಭವ, ಸಂತೋಷ, ದುಃಖ, ಶ್ರಮ, ಆಚರಣೆ ಹಾಗೂ ಸಂಪ್ರದಾಯಗಳನ್ನು ಜನಪದ ಹಾಡುಗಳ ಮೂಲಕ ಮುಂದಿನ ಪೀಳಿಗೆಗೆ ತಲುಪಿಸಿದ್ದಾರೆ. ಆದ್ದರಿಂದ ಜನಪದ ಗೀತೆಗಳು ಕೇವಲ ಮನರಂಜನೆಯ ಸಾಧನವಲ್ಲ, ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿವೆ ಎಂದು ಹೇಳಿದರು.

ಯುವಜನರು ತಮ್ಮ ನೆಲದ ಸಂಸ್ಕೃತಿಗಿಂತ ಹೊರಗಿನ ಸಂಗೀತದತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಆತಂಕದ ಸಂಗತಿ. ಶಾಲೆ, ಕಾಲೇಜು, ಗ್ರಾಮೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಾತ್ರೆಗಳಲ್ಲಿ ಜನಪದ ಹಾಡುಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಹಿರಿಯ ಕಲಾವಿದರಿಗೆ ಗೌರವ ನೀಡಿ, ಅವರಿಂದ ಯುವ ಪೀಳಿಗೆಗೆ ಈ ಕಲೆಯನ್ನು ಕಲಿಸುವ ವ್ಯವಸ್ಥೆ ಮಾಡಬೇಕು. ಮನೆಗಳಲ್ಲಿಯೇ ಮಕ್ಕಳಿಗೆ ಜನಪದ ಹಾಡುಗಳನ್ನು ಪರಿಚಯಿಸುವ ಮೂಲಕ ನಮ್ಮ ಪರಂಪರೆಯನ್ನು ಜೀವಂತವಾಗಿಡಬಹುದು ಎಂದು ತಿಳಿಸಿದರು.

ಜನಪದ ಹಾಡುಗಳು ನಮ್ಮ ಭಾಷೆಯ ಸೊಗಡನ್ನು ಹೆಚ್ಚಿಸುವುದರ ಜೊತೆಗೆ ಸಂಸ್ಕೃತಿಯ ಹೆಮ್ಮೆಯನ್ನು ಸಾರುತ್ತವೆ ಹಾಗೂ ಸಮಾಜದಲ್ಲಿ ಒಗ್ಗಟ್ಟನ್ನು ಬೆಳೆಸುತ್ತವೆ. ಎಲ್ಲರೂ ಸೇರಿ ಜನಪದ ಕಲೆ ಮತ್ತು ಹಾಡುಗಳನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಎಸ್‌ಡಿಎಂಸಿ ಸದಸ್ಯ ದೇವಿಂದ್ರ ಮಾತನಾಡಿ, ಈ ಭಾಗದ ಜನಪದ ಕಲೆ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾವಿದರ ಕೊಡುಗೆ ಮಹತ್ವದ್ದಾಗಿದೆ. ಯುವ ಕಲಾವಿದ ಶಂಕರ್ ಕಾಂಬ್ಳೆ ಅವರ ಜನಪದ ಪ್ರದರ್ಶನ ನಮ್ಮ ಇತಿಹಾಸ ಮತ್ತು ಸಂಸ್ಕೃತಿಯನ್ನು ಜೀವಂತವಾಗಿ ಬಿಂಬಿಸಿದ್ದು, ಇಂತಹ ಕಲಾವಿದರಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ‌ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ್ ಪ್ಯಾಗೆ‌, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಲಕ್ಷ್ಮೀಬಾಯಿ ಕಾರಪೆಂಟರ್, ಭೀಮರಾವ್ ಸಾಗರ್, ಉಪನ್ಯಾಸಕ ವಿಜಯಕುಮಾರ್ ಪ್ಯಾಗೆ, ಕರಣ್ ಕಾರಪೆಂಟರ್, ಸಿದ್ಧಾರ್ಥ ಹುಳಕರ್, ಸುಮಿತ್ ಪ್ಯಾಗೆ, ಸುದೀಪ್, ಅಂಕುಶ್ ಶಿಕ್ಷಣಕರ್ ಹಾಗೂ ಸುಮಿತ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

folk songsBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X