ಬೀದರ್ | ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರಿಗೆ ಛಾಯಾರತ್ನ ಪ್ರಶಸ್ತಿ

ಬೀದರ್ : ಜಿಲ್ಲೆಯ ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರು ಛಾಯಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗೋಪಿಚಂದ್ ತಾಂದಳೆ ಅವರು ಸುಮಾರು 2 ದಶಕದಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಈ ಸೇವೆಯನ್ನು ಪರಿಗಣಿಸಿ ಛಾಯಾರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜೂ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಷಿಯೇಶನ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಚಿತ್ರಕಾರರ ಸಂಘದ ಸಹಯೋಗದಲ್ಲಿ ಪೋಟೋ ಟುಡೇ ವಸ್ತುಪ್ರದರ್ಶನ ಹಾಗೂ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರಿಗೆ ಛಾಯಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಿದ್ದಾರೆ. ಹಾಗೆಯೇ ಜೂ.27 ರಿಂದ 29ರ ವರೆಗೆ 'ಪೋಟೋ ಟುಡೇ' ವಸ್ತುಪ್ರದರ್ಶನ ನಡೆಯಲಿದೆ ಎಂದು ತಿಳಿದು ಬಂದಿದೆ.
Next Story





