Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ದಲಿತ ರೈತನ ಜಮೀನಿಗೆ ರಕ್ಷಣೆ...

Bidar | ದಲಿತ ರೈತನ ಜಮೀನಿಗೆ ರಕ್ಷಣೆ ನೀಡಬೇಕು : ಅಂಬಾದಾಸ್ ಸೈನ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Sept 2026 6:41 PM IST
share
Bidar | ದಲಿತ ರೈತನ ಜಮೀನಿಗೆ ರಕ್ಷಣೆ ನೀಡಬೇಕು : ಅಂಬಾದಾಸ್ ಸೈನ್ಯ ಆಗ್ರಹ

ಬೀದರ್: ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಹಿಂದೆ ಸ್ಮಶಾನಕ್ಕಾಗಿ ಮೀಸಲಾಗಿದ್ದ ಜಮೀನು ಒತ್ತುವರಿಯಾಗಿದ್ದು, ಇದೀಗ ಸ್ಮಶಾನ ಭೂಮಿ ನೀಡುವ ಹೆಸರಿನಲ್ಲಿ ದಲಿತ ರೈತನ ಖಾಸಗಿ ಜಮೀನನ್ನು ಕಬಳಿಸಲು ಪ್ರಯತ್ನ ನಡೆಯುತ್ತಿದೆ. ಸರ್ಕಾರ ಕೂಡಲೇ ಆ ಜಮೀನಿಗೆ ರಕ್ಷಣೆ ನೀಡಬೇಕು ಎಂದು ರೈತ ಅಂಬಾದಾಸ್ ಸೈನ್ಯ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸುಮಾರು 25–26 ವರ್ಷಗಳ ಹಿಂದೆ ಸರ್ವೆ ನಂ.72ರಲ್ಲಿ 1 ಎಕರೆ 39 ಗುಂಟೆ ಸ್ಮಶಾನ ಭೂಮಿ ಮಂಜೂರಾಗಿತ್ತು. ಆದರೆ, ಆ ಜಮೀನಿನಲ್ಲಿ ಪ್ರಭಾವಿಗಳು ಮನೆ ನಿರ್ಮಿಸಿಕೊಂಡು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದರು.

ಸ್ಮಶಾನ ಭೂಮಿ ಕೊರತೆಯನ್ನು ಉಲ್ಲೇಖಿಸಿ ಕಳೆದ ಒಂದು ವಾರದಿಂದ ಕೆಲವರು ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ 5 ಎಕರೆ ಜಮೀನು ಮಂಜೂರು ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಆದರೆ, ಸರ್ವೆ ನಂ.71ರಲ್ಲಿ ದಿವಂಗತ ತುಕ್ಕಪ್ಪ ಅವರಿಗೆ ಮಂಜೂರಾಗಿದ್ದ 4 ಎಕರೆ 38 ಗುಂಟೆ ಖಾಸಗಿ ಜಮೀನನ್ನೇ ಸ್ಮಶಾನಕ್ಕೆ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

1993–94ರಲ್ಲಿ ಭೂರಹಿತ ಕುಟುಂಬಕ್ಕೆ ಲ್ಯಾಂಡ್ ಗ್ರಾಂಟ್ ಕಮಿಟಿಯ ಮೂಲಕ ಈ ಜಮೀನು ಮಂಜೂರಾಗಿದ್ದು, 2021–22ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ತುಕ್ಕಪ್ಪ ಅವರ ಸೊಸೆ ಲಕ್ಷ್ಮಿ ಅವರಿಗೆ ಮನೆ ಸಹ ಮಂಜೂರಾಗಿದೆ. ಮನೆ ನಿರ್ಮಾಣಕ್ಕೂ ಕೆಲವರು ಅಡ್ಡಿಪಡಿಸಿ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಹಿಂದೆ ಮಂಜೂರಾಗಿದ್ದ ಸ್ಮಶಾನ ಭೂಮಿಯನ್ನು ಪತ್ತೆಹಚ್ಚಿ ಸಮುದಾಯಕ್ಕೆ ಮುಕ್ತಗೊಳಿಸಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ಸ್ಮಶಾನ ಭೂಮಿ ಒದಗಿಸಬೇಕು. ಬಡ ದಲಿತ ಕುಟುಂಬದ ಪಟ್ಟಾ ಜಮೀನನ್ನು ಕಸಿದುಕೊಳ್ಳುವುದು ಅನ್ಯಾಯವಾಗಿದ್ದು, ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ತುಕ್ಕಪ್ಪ ಅವರ ಕುಟುಂಬದ ಜಮೀನಿಗೆ ರಕ್ಷಣೆ ಹಾಗೂ ಹಕ್ಕು ಬದಲಾವಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಅಮಲಾಪುರ ಗ್ರಾಮದ ಮಚ್ಚೆಂದ್ರ, ಶಂಕರ್, ಜಗನ್ನಾಥ್, ರಾಹುಲ್, ರಾಜಶೇಖರ್, ಸುಭಾಷ್, ರಾಕೇಶ್ ಹಾಗೂ ರಾಮಚಂದ್ರ ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X