ಬೀದರ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಬೀದರ್ : ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವಾತಂತ್ರ್ಯ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಅಂಬೇಡ್ಕರ್ ಎದುರಿಗೆ ಇರುವ ಫುಟ್ ಪಾತ್ ಮೇಲೆ ಟೆಂಟ್ ಹೊಡೆದು ಕುಳಿತು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಮೊಬೈಲ್ ಮೂಲಕ ಎಫ್.ಆರ್.ಎಸ್ (ಫೋಟೋ ಕ್ಯಾಪ್ಟರ್) ಮಾಹಿತಿ ಅಳವಡಿಸಿ ವರದಿ ಸಲ್ಲಿಸಲು ತೊಂದರೆಯಾಗುತ್ತಿದೆ. ಈ ಎಫ್.ಆರ್.ಎಸ್ ಯೋಜನೆಯು ತಕ್ಷಣವೇ ನಿಲ್ಲಿಸಬೇಕು. ಇದರಿಂದಾಗಿ ನಮಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಆಗ್ರಹಿಸಿದರು.
ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಒಳ್ಳೆಯ ಗುಣಮಟ್ಟದ ಆಹಾರ ಪದಾರ್ಥ ಸರಬರಾಜು ಮಾಡಬೇಕು. ಪ್ರತಿ ತಿಂಗಳು ಒಳ್ಳೆ ಗುಣಮಟ್ಟದ ಮೊಟ್ಟೆಗಳನ್ನು ಸರಬರಾಜು ಮಾಡಬೇಕು. ಸದ್ಯ ಮೊಟ್ಟೆ ಸರಬರಾಜು ಮಾಡುತ್ತಿರುವ ಗುತ್ತಿಗೆದಾರರ ಟೆಂಡರ್ ಕೂಡಲೇ ರದ್ದುಪಡಿಸಬೇಕು ಎಂದು ತಮ್ಮ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಲಕ್ಷ್ಮೀ ದಂಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಲೋಚನಾ ಪೂಜಾರಿ, ಜಿಲ್ಲಾ ಸಹ ಕಾರ್ಯದರ್ಶಿ ಮನೋರಂಜನಿ, ಶಕುಂತಲಾ ಅಮಲಾಪುರ, ಸರುಬಾಯಿ, ಅನಿತಾ, ಇಂದೂಮತಿ, ಭಾಗ್ಯಜ್ಯೋತಿ ಹಾಗೂ ಜಗದೇವಿ ಸೇರಿದಂತೆ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.







