Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ದಲಿತ ಬಾಲಕಿ ಕೊಲೆ ಪ್ರಕರಣವನ್ನು...

Bidar | ದಲಿತ ಬಾಲಕಿ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 May 2026 6:59 PM IST
share
Bidar | ದಲಿತ ಬಾಲಕಿ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ಪ್ರತಿಭಟನೆ

ಬೀದರ್: ಔರಾದ್ ತಾಲ್ಲೂಕಿನ ಬೆಳಕುಣಿ ಗ್ರಾಮದ 16 ವರ್ಷದ ದಲಿತ ಬಾಲಕಿ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರನ್ನು ಅಮಾನತುಗೊಳಿಸಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಹುಮನಾಬಾದ್‌ನ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕಲಬುರಗಿಯ ಉಪ ಆರಕ್ಷಕ ಮಹಾನಿರೀಕ್ಷಕರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಬೆಳಕುಣಿ ಗ್ರಾಮದ 16 ವರ್ಷದ ಬಾಲಕಿಯನ್ನು ಲಖನ್ ಪವಾರ್ (35) ಎಂಬಾತ ಮೇ 8ರಂದು ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಬಾಲಕಿ ಮನೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಯುಡಿಆರ್ ವರದಿ ಸಿದ್ಧಪಡಿಸಿ, ಬಾಲಕಿಯ ತಾಯಿಯಿಂದ ಒತ್ತಾಯಪೂರ್ವಕವಾಗಿ ಸಹಿ ಪಡೆಯಲಾಗಿದೆ ಎಂದು ದೂರಲಾಗಿದೆ.

ಕುಸ್ತಿ ಹಾಗೂ ಕಬ್ಬಡಿ ಕ್ರೀಡಾಪಟುವಾಗಿದ್ದ ಬಾಲಕಿಗೆ ತರಬೇತಿ ನೀಡುವ ನೆಪದಲ್ಲಿ ಲಖನ್ ಪವಾರ್ ಸುಮಾರು ಎರಡು ವರ್ಷಗಳಿಂದ ತನ್ನ ಮನೆಯಲ್ಲಿ ಕೆಲಸ ಮಾಡಿಸಿಕೊಂಡಿದ್ದಾನೆ. ಆತನ ಅಸಭ್ಯ ವರ್ತನೆಯಿಂದ ಗಾಬರಿಗೊಂಡ ಬಾಲಕಿ ಏಪ್ರಿಲ್ ತಿಂಗಳಲ್ಲಿ ಮನೆಗೆ ಮರಳಿದ್ದಳು. ನಂತರ ಆಕೆಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಪ್ರಕರಣದ ಕುರಿತು ಚರ್ಚಿಸಲು ಅಂಬೇಡ್ಕರ್ ಭವನದಲ್ಲಿ ಸಭೆ ಸೇರಿದ್ದ ದಲಿತ ಸಂಘಟನೆಗಳ ಮುಖಂಡರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವಿಡಿಯೋ ಕಾಲ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪವೂ ಮನವಿಯಲ್ಲಿ ಮಾಡಲಾಗಿದೆ. “ಪ್ರಕರಣದ ಬಗ್ಗೆ ನನ್ನನ್ನು ಸಂಪರ್ಕಿಸದೆ ಸಾರ್ವಜನಿಕವಾಗಿ ಚರ್ಚೆ ಅಥವಾ ಪ್ರತಿಭಟನೆ ನಡೆಸಿದರೆ ಪ್ರಕರಣ ದಾಖಲಿಸಲಾಗುವುದು” ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರತಿಭಟನಾಕಾರರು ಕೊಲೆ ಆರೋಪಿ ಲಖನ್ ಪವಾರ್ ವಿರುದ್ಧ ಅಪಹರಣ, ಪೋಕ್ಸೋ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಬೇಕು, ಬಾಲಕಿಯ ಶವ ಮರುಪರೀಕ್ಷೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಕುಶ್ ಗೋಖಲೆ, ಶಿವರಾಜ್ ಚಿನಕೇರಿ, ಗಜೇಂದ್ರ ಕನಕಟ್ಟಾಕರ್, ಗೌತಮ್ ಚೌವ್ಹಾಣ್, ಗಣಪತಿ ಅಷ್ಟೂರೆ, ದಿಲೀಪಕುಮಾರ್ ಮರಪಳ್ಳಿ, ಜಮೀರ್ ಖಾನ್, ರಾಜಕುಮಾರ್ ಮೂಲಭಾರತಿ, ಕಪಿಲ್ ಗೋಡಬೋಲೆ, ವಿಷ್ಣುವರ್ಧನ್ ವಾಲ್ದೊಡ್ಡಿ, ಶಶಿ ಡಾಂಗೆ, ಹರ್ಷಿತ್ ದಾಂಡೆಕರ್, ರಾಹುಲ್ ಖಂದಾರೆ ಹಾಗೂ ರಾಜಕುಮಾರ್ ಶಿಂದೆ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

Tags

protestBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X