Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮರಾಠಿ, ಉರ್ದು ಮಾಧ್ಯಮದ...

Bidar | ಮರಾಠಿ, ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆ ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Aug 2026 8:25 PM IST
share
Bidar | ಮರಾಠಿ, ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆ ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

ಬೀದರ್: ರಾಜ್ಯ ಸರ್ಕಾರ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ಬೀದರ್ ಜಿಲ್ಲೆಯ ಮರಾಠಿ, ಉರ್ದು ಸೇರಿದಂತೆ ಎಲ್ಲ ಭಾಷಾ ಮಾಧ್ಯಮಗಳ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್‌ಎಫ್) ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಎಂಆರ್‌ಎಫ್ ಅಧ್ಯಕ್ಷ ಡಾ. ಮಕ್ಸೂದ್ ಚಂದಾ ಅವರ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಡಿಡಿಪಿಐ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಡಾ. ಮಕ್ಸೂದ್ ಚಂದಾ, ಶಿಕ್ಷಣ ಹಾಗೂ ಸಮಾನತೆಯ ಹಕ್ಕಿನ ಬಗ್ಗೆ ಮಾತನಾಡುವ ಸರ್ಕಾರ ಮರಾಠಿ ಮತ್ತು ಉರ್ದು ಮಾಧ್ಯಮದ ಅರ್ಹ ಶಿಕ್ಷಕ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಬಾರದು. ಪ್ರಸ್ತುತ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪರಿಷ್ಕರಿಸಿ, ಎರಡೂ ಮಾಧ್ಯಮಗಳ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಬೀದರ್ ಜಿಲ್ಲೆ ಗಡಿ ಪ್ರದೇಶವಾಗಿದ್ದು, ನಿಜಾಮರ ಕಾಲದಿಂದಲೂ ಉರ್ದು ಮಾಧ್ಯಮದ ಹಲವು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಮಹಾರಾಷ್ಟ್ರ ಗಡಿ ಹೊಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮರಾಠಿ ಮಾಧ್ಯಮದ ಶಾಲೆಗಳೂ ಇವೆ. ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಅರ್ಹ ಅಭ್ಯರ್ಥಿಗಳು ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಬಂದಿರುವುದರಿಂದ ಅಭ್ಯರ್ಥಿಗಳಲ್ಲಿ ನಿರೀಕ್ಷೆ ಮೂಡಿದೆ. ಆದರೆ ಮರಾಠಿ ಹಾಗೂ ಉರ್ದು ಮಾಧ್ಯಮಗಳನ್ನು ನೇಮಕಾತಿ ಪ್ರಕ್ರಿಯೆಯಿಂದ ಹೊರಗಿಟ್ಟರೆ ಮುಂದಿನ ಅವಕಾಶ ಯಾವಾಗ ದೊರೆಯಲಿದೆ ಎಂಬುದು ಸ್ಪಷ್ಟವಿಲ್ಲ. ಟಿಇಟಿ ಸೇರಿದಂತೆ ಅಗತ್ಯ ಅರ್ಹತೆ ಪಡೆದಿರುವ ಹಲವು ಅಭ್ಯರ್ಥಿಗಳು ಉದ್ಯೋಗದ ನಿರೀಕ್ಷೆಯಲ್ಲಿದ್ದು, ವಿಳಂಬವಾದರೆ ವಯೋಮಿತಿ ದಾಟಿ ಉದ್ಯೋಗಾವಕಾಶ ಕಳೆದುಕೊಳ್ಳುವ ಆತಂಕವಿದೆ ಎಂದರು.

ಕನ್ನಡ ಅಥವಾ ಇಂಗ್ಲಿಷ್ ಮಾಧ್ಯಮದ ಶಿಕ್ಷಕರ ನೇಮಕಾತಿಗೆ ತಮ್ಮ ವಿರೋಧವಿಲ್ಲ. ಆದರೆ ಮರಾಠಿ ಮತ್ತು ಉರ್ದು ಮಾಧ್ಯಮದ ಅರ್ಹ ಅಭ್ಯರ್ಥಿಗಳಿಗೂ ಸಮಾನ ಅವಕಾಶ ನೀಡಬೇಕು. ಪ್ರಸ್ತುತ ಅಧಿಸೂಚನೆಯನ್ನು ಪರಿಷ್ಕರಿಸಿ ಅಗತ್ಯ ಹುದ್ದೆಗಳನ್ನು ಸೇರಿಸಿ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಕ ಅಭ್ಯರ್ಥಿಗಳ ಹಕ್ಕಿಗಾಗಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಂ.ಡಿ. ಶಕೀಲ್ ಅಹ್ಮದ್, ಎಂ.ಡಿ. ಮುಬಾಶಿರ್ ಶಿಂಧೆ, ಸೈಯದ್ ಮನ್ಸೂರ್ ಖಾದ್ರಿ, ಅನ್ಸಾರ್ ಉಲ್ಲಾ ಬೇಗ್, ಯೂಸುಫ್ ರಹೀಂ ಬಿದ್ರಿ, ಎಂ.ಡಿ. ಅಮೀನ್ ನವಾಜ್, ಸಜ್ಜಾದ್ ಸಾಹೇಬ್, ಶೇಖ್ ಮಸೀಯುದ್ದೀನ್, ಎಂ.ಡಿ. ಸಾಮಿ, ಎಂ.ಡಿ. ಸುಲ್ತಾನ್ ಹಾಗೂ ಖಲೀಲ್ ಖಾನ್ ಸೇರಿದಂತೆ ಉರ್ದು, ಮರಾಠಿ ಶಿಕ್ಷಕರು ಮತ್ತು ಇತರರು ಭಾಗವಹಿಸಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X