Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರೋಸ್ಟರ್ ಪದ್ದತಿ ಒಳ ಮೀಸಲಾತಿ...

Bidar | ರೋಸ್ಟರ್ ಪದ್ದತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆ: ಫರ್ನಾಂಡಿಸ್

ವಾರ್ತಾಭಾರತಿವಾರ್ತಾಭಾರತಿ3 March 2026 5:26 PM IST
share
Bidar | ರೋಸ್ಟರ್ ಪದ್ದತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆ: ಫರ್ನಾಂಡಿಸ್
"ಡಿಪಿಎಆರ್ ಆದೇಶ ಹಿಂಪಡೆದು ಒಳ ಮೀಸಲಾತಿ ಜಾರಿ ಮಾಡಲಿ"

ಬೀದರ್: ಫೆ.27ರಂದು ಹೊರಡಿಸಿರುವ ಡಿಪಿಎಆರ್ ಆದೇಶವನ್ನು ತಕ್ಷಣ ಹಿಂಪಡೆದು ಪರಿಷ್ಕೃತ ರೋಸ್ಟರ್ ಪದ್ಧತಿಯ ಒಳ ಮೀಸಲಾತಿ ಜಾರಿಗೊಳಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೋಷಿತ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಸಾಮಾಜಿಕ ನ್ಯಾಯಕ್ಕಾಗಿ 35 ವರ್ಷಗಳ ಹೋರಾಟದ ಫಲವಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿದ್ದರೂ, ಗೆಜೆಟ್ ಪ್ರಕಟಣೆ ನೀಡದೆ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಆದೇಶ ಹೊರಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಜಾರಿಗೊಳಿಸದೆ ಹಳೆಯ ಮೀಸಲಾತಿ ಪದ್ಧತಿ ಮುಂದುವರಿಸುವ ಮೂಲಕ ಮಾದಿಗ ಹಾಗೂ ಸಂಬಂಧಿತ ಜಾತಿಗಳಿಗೆ ಸಿಗಬೇಕಾದ ಸಾವಿರಾರು ಹುದ್ದೆಗಳು ತಪ್ಪಿಸುವ ಪ್ರಯತ್ನ ನಡೆದಿದೆ. 56,342 ಹುದ್ದೆಗಳ ಭರ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸಿಗಬೇಕಾದ ಸುಮಾರು 3,387ಕ್ಕೂ ಹೆಚ್ಚು ಹುದ್ದೆಗಳು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಡಿಪಿಎಆರ್ ಆದೇಶವನ್ನು ಹಿಂಪಡೆಯದಿದ್ದರೆ ಮಾ.5ರಂದು ಬೀದರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಫರ್ನಾಂಡಿಸ್ ಹಿಪ್ಪಳಗಾಂವ್ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ರೋಹಿದಾಸ್ ಘೋಡೆ, ಮಾದಿಗ ನೌಕರರ ಸಂಘದ ಅಧ್ಯಕ್ಷ ದೇವದಾಸ್ ತುಮಕುಂಟೆ, ಸಮಾಜದ ಮುಖಂಡ ಕಲ್ಲಪ್ಪ ವೈದ್ಯ, ಸಮಿತಿಯ ಉಪಾಧ್ಯಕ್ಷ ಕಮಲಾಕರ್ ಹೆಗಡೆ, ಒಕ್ಕೂಟದ ಪ್ರಮುಖರಾದ ವಿಜಯಕುಮಾರ್ ಹಿಪ್ಪಳಗಾಂವ್, ಸೂರ್ಯಕಾಂತ್ ದಂಡಿನ್, ಆಸ್ಕರ್ ಫರ್ನಾಂಡಿಸ್, ಪೀಟರ್ ಶ್ರೀಮಂಡಲ್, ಬಸವರಾಜ್ ಮಾಳಗೆ, ಉಮೇಶ್ ಗುತ್ತೇದಾರ್, ತುಳಸಿರಾಮ್ ಸೂರ್ಯವಂಶಿ, ಶಿವಣ್ಣ ಹಿಪ್ಪಳಗಾಂವ್, ಹರೀಶ್ ಗಾಯಕವಾಡ್, ಗುಂಡಪ್ಪ ಕೋಟೆ, ಅಬ್ರಹಾಂ ಸೂರ್ಯವಂಶಿ, ಸನ್ನಿ ಹಿಪ್ಪಳಗಾಂವ್, ಸಂದೀಪ್ ನಂದಿ, ಪಂಡಿತ್ ಭಾಗ್ಯಕರ್ ಹಾಗೂ ಸಂಜು ಹಿಪ್ಪಳಗಾಂವ್ ಇದ್ದರು.

Tags

protestBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X