Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಆರೋಗ್ಯ ಕೇಂದ್ರದ ಶುಶ್ರೂಷಕಿ...

Bidar | ಆರೋಗ್ಯ ಕೇಂದ್ರದ ಶುಶ್ರೂಷಕಿ ವರ್ಗಾವಣೆ, ಡಿಎಚ್‌ಒ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ9 Nov 2026 5:09 PM IST
share
Bidar | ಆರೋಗ್ಯ ಕೇಂದ್ರದ ಶುಶ್ರೂಷಕಿ ವರ್ಗಾವಣೆ, ಡಿಎಚ್‌ಒ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ

ಬೀದರ್: ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಜನವಾಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಗ್ಯಲಕ್ಷ್ಮಿ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಅಹಿಂದ್ ಸಂಘಟನೆಯ ವತಿಯಿಂದ ಸೋಮವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಕಾರ್ಯಕರ್ತರು, ಡಿಎಚ್‌ಒ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾಧಿಕಾರಿಗಳ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಬೀದರ್ ತಾಲೂಕಿನ ಜನವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಗ್ಯಲಕ್ಷ್ಮಿ ಅವರು ಆರೋಗ್ಯ ಕೇಂದ್ರಕ್ಕೆ ಬರುವ ಗರ್ಭಿಣಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಗರ್ಭಿಣಿಯರಿಗೆ ಹೊಟ್ಟೆ ನೋವು ಕಾಣಿಸಿಕೊಂಡರೂ ಸಕಾಲದಲ್ಲಿ ಹೆರಿಗೆ ಮಾಡಿಸದೆ, ಗರ್ಭಿಣಿಯರು ಹಾಗೂ ಮಕ್ಕಳ ಜೀವದೊಂದಿಗೆ ಆಟವಾಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಅದರಂತೆ ಡಿಎಚ್‌ಒ ಅವರು ಭಾಗ್ಯಲಕ್ಷ್ಮಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ, ಕೆಲವೇ ದಿನಗಳ ಬಳಿಕ ಡಿಎಚ್‌ಒ ಅವರೇ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದಾರೆ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಿ ಸೇವೆಯಲ್ಲಿ ಬೇಜವಾಬ್ದಾರಿಯಿಂದ ಹಾಗೂ ಮನಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.

ಗರ್ಭಿಣಿಯರು ಮತ್ತು ಚಿಕ್ಕ ಮಕ್ಕಳ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಶುಶ್ರೂಷಕಿ ಭಾಗ್ಯಲಕ್ಷ್ಮಿ ಅವರನ್ನು ಕೂಡಲೇ ವರ್ಗಾವಣೆಗೊಳಿಸಬೇಕು. ವರ್ಗಾವಣೆ ಆದೇಶವನ್ನು ರದ್ದುಗೊಳಿಸುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಡಿಎಚ್‌ಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಧರಣಿಯಲ್ಲಿ ರಾಷ್ಟ್ರೀಯ ಅಹಿಂದ್ ಸಂಘಟನೆಯ ಜಿಲ್ಲಾಧ್ಯಕ್ಷ ಘಾಳೇಪ್ಪಾ ಬೇಮಳಖೇಡಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಭಂಗೆ, ಬಿವಿಎಸ್ ಜಿಲ್ಲಾಧ್ಯಕ್ಷ ಪ್ರದೀಪ್ ನಾಟೇಕರ್, ಲಕ್ಷ್ಮಣ್ ಎಸ್. ದೇವಕ, ಸೋಮಶೇಖರ್ ಕರಕನಳ್ಳಿ, ಅಂಥೋನಿ ಎಸ್. ದೊಡ್ಡಿ, ಸಚಿನ್ ಮೇತ್ರೆ ಹಾಗೂ ರವಿ ಶರ್ಮಾ ಸೇರಿದಂತೆ ಇತರರು ಭಾಗವಹಿಸಿದ್ದರು.

Tags

Health CenterprotestBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X