Bidar | ಮೇ 30ರಂದು ವಾಹನಗಳ ಬಹಿರಂಗ ಹರಾಜು

ಸಾಂದರ್ಭಿಕ ಚಿತ್ರ PC | GROK
ಬೀದರ್ : ವಲಯ ವ್ಯಾಪ್ತಿಯಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆಯಿಂದ ದಾಖಲಿಸಲಾದ ವಿವಿಧ ಅಬಕಾರಿ ಪ್ರಕರಣಗಳಲ್ಲಿ ಜಪ್ತಿಪಡಿಸಲಾದ ಮತ್ತು ಪ್ರಾಧಿಕೃತ ಅಧಿಕಾರಿಗಳು ಹಾಗೂ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಬೀದರ್ ಜಿಲ್ಲೆ ಅವರಿಂದ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೆಂಡ ವಿವಿಧ ಬಗೆಯ ಒಟ್ಟು 51 ವಾಹನಗಳನ್ನು ಮೇ 30 ರಂದು ಬೆಳಿಗ್ಗೆ 10 ಗಂಟೆಗೆ ಅಬಕಾರಿ ಭವನದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಪ್ರಾಧಿಕೃತ ಅಧಿಕಾರಿಗಳು ಹಾಗೂ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಅವರು ಆದೇಶಿಸಿರುತ್ತಾರೆ ಎಂದು ಬೀದರ್ ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಹರಾಜಿನಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಮೇ 30 ರಂದು ಬೆಳಿಗ್ಗೆ 10 ಗಂಟೆಗೆ ಅಬಕಾರಿ ಭವನದಲ್ಲಿ ಹಾಜರಿರಬೇಕು. ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಜಿ ಎಸ್ ಟಿ ನೋಂದಾಯಿತರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಬಕಾರಿ ನಿರೀಕ್ಷಕರು, ಬೀದರ್ ವಲಯ, ಬೀದರ್ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.




