Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಬಿಎಲ್‌ಓ ತಮ್ಮ ಮನೆಗೆ ಭೇಟಿ...

ಬೀದರ್ | ಬಿಎಲ್‌ಓ ತಮ್ಮ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು : ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ3 July 2026 7:31 PM IST
share
ಬೀದರ್ |  ಬಿಎಲ್‌ಓ ತಮ್ಮ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು : ಡಿಸಿ ಶಿಲ್ಪಾ ಶರ್ಮಾ

ಬೀದರ್ : ಭಾರತ ಚುನಾವಣಾ ಆಯೋಗ ಮತ್ತು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಬಿಎಲ್‌ಓ ತಮ್ಮ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶಿರ್ಮಾ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯ ವೇಳಾಪಟ್ಟಿಯಂತೆ 2026ರ ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಓ) ತಮ್ಮ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ಮತದಾರರಿಗೆ ಎನ್ಯುಮೆರೆಷನ್‌ ಫಾರ್ಂ ನೀಡಲಾಗುವುದು. ಈ ಎನ್ಯುಮೆರೆಷನ್‌ ಫಾರ್ಂನಲ್ಲಿ ಮತದಾರರು ಮಾಹಿತಿಯನ್ನು ಭರ್ತಿಮಾಡಿ ಹಾಗೂ ಬಿಎಲ್ಓ ಅವರು ಮನೆಗೆ ಭೇಟಿ ನೀಡಿದಾಗ, ಮತದಾರರು ಮನೆಯಲ್ಲಿ ಇಲ್ಲದಿದ್ದರೆ ಬಿಎಲ್ಓ ಅವರು 3 ಬಾರಿ ಮತದಾರರ ಮನೆಗೆ ಭೇಟಿ ನೀಡುವರು. ಅಂತಹ ಪಕ್ಷದಲ್ಲಿಯು ಮತದಾರರು ಇಲ್ಲದಿರುವಾಗ ಮಹಜರ ಮಾಡಿಕೊಳ್ಳುವರು ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಎಲ್ಓ ಅವರು ತಮ್ಮ ಮನೆಗೆ ಭೇಟಿ ನೀಡಿರುವ ಸಮಯದಲ್ಲಿ ತಾವು ಸಹಕರಿಸಿ, ವಿತರಿಸಲಾಗುವ ಎನ್ಯುಮೆರೆಷನ್‌ ಫಾರ್ಂನಲ್ಲಿ ತಮ್ಮ ಮಾಹಿತಿಯನ್ನು ಭರ್ತಿಮಾಡಿ ನಿಗದಿತ ಸ್ಥಳದಲ್ಲಿ ಸಹಿಮಾಡಿ, ಪುನಃ ಸಂಬಂಧಪಟ್ಟ ಬಿಎಲ್ಓ ಅವರಿಗೆ ಹಿಂದಿರುಗಿಸಬೇಕು. ಹಾಗೆಯೇ ಬೇರೆ ಕಡೆಯಿಂದ ವಲಸೇ ಬಂದಿರುವ ಮತದಾರರು ಅಥವಾ ಮದುವೆ ಮಾಡಿಕೊಂಡು ಬಂದಿರುವ ಮತದಾರರು ತಮ್ಮ ತಂದೆ ಅಥವಾ ತಾಯಿಯ 2002ರ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿರುವ ಮಾಹಿತಿಯನ್ನು ಬಿಎಲ್ಓ ಅವರಿಗೆ ಒದಗಿಸಿ ಸ್ವೀಕೃತಿಯನ್ನು ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

Tags

Bidar‌BLODCShilpa Sharma
share
ವಾರ್ತಾಭಾರತಿ
ವಾರ್ತಾಭಾರತಿ
Next Story
X