ಬೀದರ್ | ಇಸ್ಪೀಟ್ ಜೂಜಾಟದ ಮೇಲೆ ದಾಳಿ, 80 ಸಾವಿರ ರೂ. ವಶ : ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಬೀದರ್ : ಇಸ್ಪೀಟ್ ಜೂಜಾಟದ ಮೇಲೆ ದಾಳಿ ನಡೆಸಿದ ಭಾಲ್ಕಿ ನಗರದ ಪೊಲೀಸ್ ಠಾಣೆಯ ಪೊಲೀಸರು 80 ಸಾವಿರ ರೂ. ವಶಕ್ಕೆ ಪಡೆದು, 11 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಭಾಲ್ಕಿ ನಗರದ ಲೆಕ್ಚರರ್ ಕಾಲೋನಿಯ ರಸ್ತೆಯ ಫರ್ನಿಚರ್ ಅಂಗಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕೆಲ ಜನರು ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೆರೆಗೆ ಭಾಲ್ಕಿ ಪೊಲೀಸರ ತಂಡದಿಂದ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಜೂಜಾಟದಲ್ಲಿ ತೊಡಗಿಸಿದ್ದ ಸುಮಾರು 80 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಜೂಜಾಟದಲ್ಲಿ ತೊಡಗಿದ 11 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Next Story





