ಬೀದರ್ | ಜಿಲ್ಲೆಯ ವಿವಿಧೆಡೆ ಇಸ್ಪೀಟ್ ಜೂಜಾಟದ ಮೇಲೆ ದಾಳಿ

ಸಾಂದರ್ಭಿಕ ಚಿತ್ರ
ಬೀದರ್ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಮೇಲೆ ದಾಳಿ ನಡೆಸಿದ ಪೊಲೀಸರು, ಸಾವಿರಾರು ರೂ. ನಗದು ಹಣ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಮೇಲೆ ದಾಳಿ ನಡೆಸಲಾಗಿದೆ.
ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ತಡೋಳಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟತದಲ್ಲಿ ತೊಡಗಿದ ಮಾಹಿತಿಯಂತೆ, ಪಿಎಸ್ಐ ನಾಗೇಂದ್ರ ಅವರು ತಮ್ಮ ಸಿಬ್ಬಂದಿಯವರೊಂದಿಗೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದವರ ಮೇಲೆ ದಾಳಿ ಮಾಡಿ 15,450 ರೂ. ವಶ ಪಡೆದಿದ್ದಾರೆ. ಮನ್ನಾಏಖೇಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ತಾಳಮಡಗಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟತದಲ್ಲಿ ತೊಡಗಿದ ಮಾಹಿತಿಯಂತೆ, ಪಿಎಸ್ಐ ಮಹೇಂದ್ರಕುಮಾರ್ ಅವರು ತಮ್ಮ ಸಿಬ್ಬಂದಿರವರೊಂದಿಗೆ ದಾಳಿ ಮಾಡಿ 14,120 ರೂ. ವಶ ಪಡಿಸಿಕೊಂಡಿದ್ದಾರೆ.
ಚಿಟಗುಪ್ಪಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ಪಟ್ಟಣದ ಐ.ಬಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟತದಲ್ಲಿ ತೊಡಗಿದ ಮಾಹಿತಿಯಂತೆ, ಪಿಎಸ್ಐ ಬಸಲಿಂಗಪ್ಪಾ ಅವರು ತಮ್ಮ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ 8 ಸಾವಿರ ರೂ. ವಶಕ್ಕೆ ಪಡೆದಿದ್ದಾರೆ. ಹಳ್ಳಿಖೇಡ್ (ಬಿ) ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹಳ್ಳಿಖೇಡ್ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಮಾಹಿತಿಯಂತೆ, ಪಿಎಸ್ಐ ವಿಜಯಕುಮಾರ್ ಡಿ.ನಾಯ್ಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಮಾಡಿ 6 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಎಲ್ಲ ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ದಾಳಿಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯ ಶ್ಲಾಘನಿಯವಾಗಿದ್ದು, ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ಪೊಲೀಸರ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಎಸ್ಪಿ ಪ್ರದೀಪ್ ಗುಂಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.







