ಬೀದರ್ | ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ರಮೇಶ್ ಮರ್ಜಾಪೂರ್ ಆಯ್ಕೆ

ಬೀದರ್ : ಜೈ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅರುಣಕುಮಾರ್ ಎಸ್. ಪಾಟೀಲ್ ಕೊಡಲಹಂಗರಗಿ ಅವರ ಆದೇಶದ ಮೇರೆಗೆ ನಡೆದ ಸಭೆಯಲ್ಲಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ರಮೇಶ್ ಮರ್ಜಾಪೂರ್ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ, ಸೈಯ್ಯದ ನವಾಜ್ ಅವರನ್ನು ಜಿಲ್ಲಾ ಗೌರವಾಧ್ಯಕ್ಷರಾಗಿ ಹಾಗೂ ಮೊಹಸಿನ್ ಪಟೇಲ್ ಖಾಶಿಂಪೂರ್ ಅವರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ಎಲ್ಲಾ ಕಾರ್ಯಕರ್ತರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ಹಾಗರಗಿ ಸೇರಿದಂತೆ ಸಂಘಟನೆಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಕನ್ನಡ ನಾಡು-ನುಡಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಲಾಯಿತು.
Next Story




