Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸಿದ್ದರಾಮಯ್ಯರ ಪ್ರತಿಮೆ ತೆರವು...

Bidar | ಸಿದ್ದರಾಮಯ್ಯರ ಪ್ರತಿಮೆ ತೆರವು : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Sept 2026 6:23 PM IST
share
Bidar | ಸಿದ್ದರಾಮಯ್ಯರ ಪ್ರತಿಮೆ ತೆರವು : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ್ : ಕಲಬುರಗಿ ನಗರದ ಸಿದ್ದರಾಮಯ್ಯ ವೃತ್ತದಲ್ಲಿ ಅಭಿಮಾನಿಗಳು ಪ್ರತಿಷ್ಠಾಪಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿರುವುದನ್ನು ಖಂಡಿಸಿ, ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆ, ಅಭಿಮಾನಿಗಳು ಪ್ರೀತಿ ಮತ್ತು ಗೌರವದಿಂದ ಸ್ಥಾಪಿಸಿದ್ದ ಪ್ರತಿಮೆಯನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿರುವುದು ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮನವಿಯಲ್ಲಿ, ಎರಡು ಬಾರಿ ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಜಾರಿಗೆ ಶ್ರಮಿಸಿರುವ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸರ್ಕಾರ ಈ ವಿಷಯದಲ್ಲಿ ತಕ್ಷಣ ಮಧ್ಯಪ್ರವೇಶಿಸಿ, ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಅದೇ ರೀತಿ, ನಿಯಮಾನುಸಾರ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರುಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಬೇಕು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

​ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಲೋಕೇಶ್ ಎಂ. ಮರ್ಜಾಪುರ್, ಗೌರವಾಧ್ಯಕ್ಷ ಶಿವರಾಜ್ ಮಲ್ಕಾಪುರೆ, ಉಪಾಧ್ಯಕ್ಷ ಶಿವು ಚಿಮಕೋಡ್, ಕಾರ್ಯದರ್ಶಿ ರಾಜ್ ಟಗರು ಆಣದೂರ್, ಆಪ್ತ ಕಾರ್ಯದರ್ಶಿ ಕುಮಾರ್ ನಿಜಾಂಪುರ್, ಗೊಂಡ ಸಮಾಜದ ಹಿರಿಯ ಮುಖಂಡ ರವಿ ದುರ್ಗೆ, ತುಕಾರಾಂ ಔದತಪುರ್, ನರಸಪ್ಪ ಯಾಕತಪುರ್ ಹಾಗೂ ರಮೇಶ್ ಭಾಗ್ಯನಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

statueSiddaramaiahBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X