ಬೀದರ್ | ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೀದರ್ : 2024-25ನೇ ಸಾಲಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ಸಾಮಾನ್ಯ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿಯು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಪರಿಷ್ಕೃತ ವರ್ಗಾವಣೆ ವೇಳಾ ಪಟ್ಟಿಯಂತೆ ಜು.2 ರಂದು ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಜು.2 ರಿಂದ 5 ವರೆಗೆ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರಿಗೆ, ಶಿಕ್ಷಕರ ವರ್ಗಾವಣೆ ಕಾಯ್ದೆ-2020 ರ ನಿಯಮ 10 (1) ರನ್ವಯ ವಿನಾಯಿತಿ ಅಥವಾ ಆದ್ಯತೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ವರ್ಗಾವಣಾ ತಂತ್ರಾಂಶದಲ್ಲಿಯೇ ವಿನಾಯಿತಿ ಅಥವಾ ಆದ್ಯತೆ ಸಲ್ಲಿಸಬೇಕು. ಲಿಖಿತ ರೂಪದಲ್ಲಿ ಸಲ್ಲಿಸುವ ವಿನಾಯಿತಿ ಅಥವಾ ಆದ್ಯತೆ ಪರಿಗಣಿಸುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





