ಬೀದರ್ | ಮದಕಟ್ಟಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ದುರಸ್ಥಿಗೆ ಗ್ರಾಮಸ್ಥರ ಆಗ್ರಹ

ಬೀದರ್ : ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿನ ಮುಖ್ಯ ರಸ್ತೆಯಾದ ನೀಲಮಠದಿಂದ ಅಂಬೇಡ್ಕರ್ ವೃತ್ತದಲ್ಲಿನ ವರೆಗಿನ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆ ದುರುಸ್ಥಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಾರ್ವಜನಿಕರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೀರೆಲ್ಲ ರಸ್ತೆ ಮೇಲೆಯೇ ಹರಿಯುತ್ತಿವೆ. ರಸ್ತೆ ಅಕ್ಕ ಪಕ್ಕದಲ್ಲಿಯೇ ಮನೆಗಳಿದ್ದು, ಸೊಳ್ಳೆಗಳು ಕಾಟ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮಸ್ಥರು ರೋಗಗಳು ಬರುವ ಆತಂಕದಲ್ಲಿದ್ದಾರೆ ಎಂದು ದೂರಲಾಗಿದೆ.
ಈ ರಸ್ತೆ ಮೇಲೆ ಮಕ್ಕಳು ಮತ್ತು ವೃದ್ಧರಿಗೆ ನಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನ ಸವಾರರು ಕೂಡ ಹೆದರಿಕೊಂಡೆ ವಾಹನ ಚಲಾವಣೆ ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆ ದುರುಸ್ಥಿ ಮಾಡಲು ಪಿಡಿಒ ಅವರನ್ನು ಕೇಳಿಕೊಂಡಾಗ ಅವರು ಸಂಪೂರ್ಣವಾಗಿ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆದಷ್ಟು ಬೇಗ ಈ ರಸ್ತೆಯ ಮತ್ತು ಚರಂಡಿಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರ ಆರೋಗ್ಯ ಕಾಪಾಡಿ, ಸುಗಮವಾಗಿ ಓಡಾಡುವುದಕ್ಕೆ ಅನುಕೂಲ ಮಾಡಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.







