Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸಮಾಜವಾದಿ ಜನತಾ ಪಕ್ಷದಿಂದ ಎಲ್ಲ...

Bidar | ಸಮಾಜವಾದಿ ಜನತಾ ಪಕ್ಷದಿಂದ ಎಲ್ಲ ಚುನಾವಣೆಯಲ್ಲಿ ಸ್ಪರ್ಧೆ : ಜಿ.ಎಂ.ಗಾಡ್ಕರ್

ವಾರ್ತಾಭಾರತಿವಾರ್ತಾಭಾರತಿ24 Aug 2026 7:13 PM IST
share
Bidar | ಸಮಾಜವಾದಿ ಜನತಾ ಪಕ್ಷದಿಂದ ಎಲ್ಲ ಚುನಾವಣೆಯಲ್ಲಿ ಸ್ಪರ್ಧೆ : ಜಿ.ಎಂ.ಗಾಡ್ಕರ್

ಬೀದರ್: ಸಮಾಜವಾದಿ ಜನತಾ ಪಕ್ಷವು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುವ ಮೂಲಕ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಜಿ.ಎಂ. ಗಾಡ್ಕರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಜಾತೀಯತೆ, ಮೇಲು-ಕೀಳು ಹಾಗೂ ಅಸಮಾನತೆ ಇದೆ ಎಂದು ಆರೋಪಿಸಿದರು. ಇವುಗಳನ್ನು ಮೀರಿ ಸಮ ಸಮಾಜ ನಿರ್ಮಿಸುವ ಉದ್ದೇಶದಿಂದ ಸಮಾಜವಾದಿ ಜನತಾ ಪಕ್ಷವನ್ನು ಕಟ್ಟಲಾಗಿದೆ ಎಂದರು.

ದೇಶದಲ್ಲಿ ಇಂದಿಗೂ ಹಲವು ದುರ್ಬಲ ವರ್ಗಗಳ ಜನರಿಗೆ ವಾಸಿಸಲು ಮನೆ, ದುಡಿದು ಬದುಕಲು ಭೂಮಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಹಾಗೂ ಬಡವರಿಗೆ ಸಮರ್ಪಕ ಆರೋಗ್ಯ ಮತ್ತು ಆರ್ಥಿಕ ಸೌಲಭ್ಯಗಳು ಸೇರಿದಂತೆ ಕನಿಷ್ಠ ಮೂಲಭೂತ ಹಕ್ಕುಗಳು ದೊರೆಯದ ಪರಿಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ ಹಾಗೂ ಮತಾಂಧತೆಯಂತಹ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿದ ಅವರು, ಜನರ ತೆರಿಗೆ ಹಣದ ದುರ್ಬಳಕೆ ಹಾಗೂ ಭ್ರಷ್ಟಾಚಾರದಿಂದ ಪ್ರಜಾಪ್ರಭುತ್ವ ವಿರೋಧಿ ಆಡಳಿತ ನಡೆಯುತ್ತಿದೆ ಎಂದು ದೂರಿದರು.

ಸಮಾಜವಾದಿ ಜನತಾ ಪಕ್ಷವು ಈಗಾಗಲೇ ರಾಜ್ಯದ ಕೆಲವು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದು, ಕೆಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ 10 ಸಾವಿರಕ್ಕೂ ಅಧಿಕ ಮತಗಳು ಬಂದಿವೆ. ಬೀದರ್‌ನಲ್ಲಿಯೂ ಆರು ತಿಂಗಳೊಳಗೆ ಪಕ್ಷವನ್ನು ಬಲಪಡಿಸುವ ಕಾರ್ಯ ಕೈಗೊಳ್ಳಲಾಗುವುದು. ಪಂಚಾಯಿತಿ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಜಿ.ಎಂ. ಗಾಡ್ಕರ್ ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಪಾಟೀಲ್, ಬಾಲಾಜಿ ಔರಾದ್ಕರ್, ಶೇಕ್ ಶಿಜಾಉದ್ದಿನ್, ವಿನೋದ್ ಕುಲಕರ್ಣಿ, ದೇವಿದಾಸ್ ರಾಥೋಡ್, ರವೀಂದ್ರ ಕೊಳ್ಳುರ್, ರೂಪಾ ಜೋಷಿ ಹಾಗೂ ರಾಜಕುಮಾರ್ ಮಾಳಗೆ ಸೇರಿದಂತೆ ಇತರರು ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X