ಬೀದರ್ | ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೀದರ್ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಸಮುದಾಯಗಳ ನಿರುದ್ಯೋಗಿ ಯುವಕ ಯುವತಿಯರ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯಗಳು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ (ನೇರ ಸಾಲ), ಉದ್ಯಮ ಶೀಲತಾ ಅಭಿವೃದ್ದಿ (ಹೈನುಗಾರಿಕೆ), ಉದ್ಯಮಶೀಲತಾ ಅಭಿವೃದ್ದಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋಕ್ರೇಡಿಟ್(ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಸೆ.17 ರ ಒಳಗಾಗಿ ಅನ್‍ಲೈನ್ https://sevasindhu.karnatak.gov.in ಲಿಂಕ್ ಮೂಲಕ (ಸೇವಾ ಸಿಂಧು ಪೂರ್ಟಲ್) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.





