ಬೀದರ್ | ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಸಿದ್ದಪ್ಪ ಮೂಲಗೆ ನೇಮಕ

ಬೀದರ್ : 2025-26ನೇ ಸಾಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಬರುವ ವಿವಿಧ ಪ್ರಶಸ್ತಿಗಳ ಆಯ್ಕೆ ಸಮಿತಿಯ ಸದಸ್ಯರಾಗಿ ಸಿದ್ದಪ್ಪ ಮೂಲಗೆ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರದ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ಅನನ್ಯ ಕೊಡುಗೆ ನೀಡುತ್ತಾ ಬಂದಿರುವ ಸಾಹಿತಿ, ಗಣ್ಯರು, ವಿದ್ವಾಂಸರು, ಕಲಾವಿದರನ್ನು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿ, ಪ್ರಶಸ್ತಿಗಳನ್ನು ಪ್ರದಾನ ಮಾಡುವ ಮೂಲಕ ಗೌರವಿಸಿಕೊಂಡು ಬರಲಾಗುತ್ತಿದೆ.
2025-26ನೇ ಸಾಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಬರುವ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗಳಿಗೆ ಅರ್ಹ ಗಣ್ಯರನ್ನು ಆಯ್ಕೆ ಮಾಡಲು ಡಾ. ಕೆ. ಮರುಳಸಿದ್ದಪ್ಪ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ಸದರಿ ಸದಸ್ಯರಾಗಿ ಸಿದ್ದಪ್ಪ ಮೂಲಗೆ ಅವರನ್ನು ನೇಮಿಸಲಾಗಿದೆ.
ನನ್ನನ್ನು ಸರ್ಕಾರದ ಉನ್ನತ ಮಟ್ಟದ ನಾಲ್ಕು ಪ್ರಶಸ್ತಿಗಳ ಆಯ್ಕೆ ಸಮಿತಿಯ ಸದಸ್ಯನಾಗಿ ಮಾಡಿದಕ್ಕೆ ಕರ್ನಾಟಕ ಸರಕಾರಕ್ಕೆ ಧನ್ಯವಾದಗಳು ಎಂದು ತಿಳಿಸಿದ ಸಿದ್ದಪ್ಪ ಮೂಲಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.





