ಬೀದರ್ | ಮಹಾಮಾನವ ಯುನಿವರ್ಸಲ್ ವೆಲ್‌ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಳ ಸಾಮೂಹಿಕ ವಿವಾಹ
ಆರ್ಥಿಕ ಸಂಕಷ್ಟದಲ್ಲಿದ್ದವರು ಇದರ ಸದುಪಯೋಗ ಪಡೆದುಕೊಳ್ಳಿ : ಅಶೋಕ್ ಕುಮಾರ್ ಮಾಳಗೆ

ಬೀದರ್ : ಮಹಾಮಾನವ ಯುನಿವರ್ಸಲ್ ವೆಲ್‌ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಡು ಬಡವರಿಗಾಗಿ 2025-26ನೇ ಸಾಲಿನಲ್ಲಿ ಸಾಮೂಹಿಕ ವಿವಾಹ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆರ್ಥಿಕ ಸಂಕಷ್ಟದಲ್ಲಿದ್ದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕ್ ಕುಮಾರ್ ಮಾಳಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.10 ರ ಒಳಗಾಗಿ ಖುದ್ದಾಗಿ ಸಂಸ್ಥೆಯ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯ ಜೊತೆಗೆ ವಧು-ವರರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಶನ್ ಕಾರ್ಡ್, ಓಟರ್ ಐಡಿ, ವಯಸ್ಸಿನ ಪ್ರಮಾಣ ಪತ್ರ (ಟಿಸಿ., ಅಂಕಪಟ್ಟಿ, ಶಾಲಾ ದಾಖಲಾತಿ, ಅನಕ್ಷರಸ್ಥರಿಗಾಗಿ ವೈದ್ಯಕೀಯ ಪ್ರಮಾಣ ಪತ್ರ), ಪಾಸಪೋರ್ಟ್ ಅಳತೆ 2 ಭಾವಚಿತ್ರ ಈ ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಅರ್ಜಿಯೊಂದಿಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಹುಡಗಿಯ ವಯಸ್ಸು 18 ತುಂಬಿರಬೇಕು. ಹುಡುಗನ ವಯಸ್ಸು 21 ತುಂಬಿರಬೇಕು. ಬಾಲ್ಯ ವಿವಾಹ ನಿಷೇಧಿಸಲಾಗಿದೆ ಎಂದು ಅವರು ಸೂಚನೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ 50 ಸಾವಿರ ರೂ. ಮತ್ತು ಕಾರ್ಮಿಕ ಇಲಾಖೆಯಿಂದ 50 ಸಾವಿರ ರೂ. ಮಂಜೂರು ಮಾಡಿಕೊಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧ್ಯಕ್ಷ, ಕಾರ್ಯದರ್ಶಿ ಅವರ ಮೊಬೈಲ್ ಸಂಖ್ಯೆ : 97402 40358, 97394 17617 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.





