Bidar | ಜಿಲ್ಲೆಯಲ್ಲಿ ಮತದಾರರ ವಿಶೇಷ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ

ಬೀದರ್: ಭಾರತ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಬೀದರ್ ಜಿಲ್ಲೆಯಲ್ಲಿ 2026ರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರ ಪರಿಶೀಲನಾ ಕಾರ್ಯಕ್ರಮದ ವೇಳಾಪಟ್ಟಿ :
ಎಸ್‌ಐಆರ್ ಅರ್ಹತಾ ದಿನಾಂಕ: ಅ.1, ತರಬೇತಿ ಮತ್ತು ಮುದ್ರಣ ತಯಾರಿ: ಜೂ.20 ರಿಂದ 29ರವರೆಗೆ, ಬಿಎಲ್ಓಗಳಿಂದ ಮನೆ-ಮನೆ ಭೇಟಿ: ಜೂ.30 ರಿಂದ ಜು.29ರವರೆಗೆ, ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ: ಜು.29, ಕರಡು ಮತದಾರರ ಪಟ್ಟಿ ಪ್ರಕಟಣೆ: ಆ.5, ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಕೆ ಅವಧಿ: ಆ.5 ರಿಂದ ಸೆ.4ರವರೆಗೆ, ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ: ಆ.5 ರಿಂದ ಅ.3ರವರೆಗೆ, ಅಂತಿಮ ಮತದಾರರ ಪಟ್ಟಿ ಪ್ರಕಟಣೆ: ಅ.7 ಎಂದು ಅವರು ಮಾಹಿತಿ ನೀಡಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಬೀದರ್ ಜಿಲ್ಲಾದ್ಯಂತ ಈ ಪ್ರಕ್ರಿಯೆ ನಡೆಯಲಿದ್ದು, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಹೆಸರು ತೆಗೆದುಹಾಕಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.




