ಬೀದರ್ | ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಸಾಮರ್ಥ್ಯಗಳು ಬೆಳವಣಿಗೆಯಾಗಿ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ : ರಾಜಶೇಖರ್ ಜವಳೆ

ಬೀದರ್ : ಕ್ರೀಡೆಗಳಿಂದ ದೈಹಿಕ ಹಾಗೂ ಬೌದ್ಧಿಕ ಸಾಮರ್ಥ್ಯಗಳು ಬೆಳವಣಿಗೆಯಾಗುವುದರೊಂದಿಗೆ ಮಾನಸಿಕ ಒತ್ತಡಗಳು ಕಡಿಮೆಯಾಗಿ ಏಕಾಗೃತೆಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಅಧ್ಯಕ್ಷ ರಾಜಶೇಖರ್ ಜವಳೆ ಅವರು ತಿಳಿಸಿದರು.
ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೀದರ್ ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ಕ್ರೀಡಾಪಟುಗಳು ಓದಿನೊಂದಿಗೆ ನಿತ್ಯ ಒಂದು ತಾಸು ಆಟವಾಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸುರೇಶ್ ಹಳೆಂಬರ್, ವಿರೇಶ್ ವಡ್ಡಿ, ನರೇಶ್, ಚಂದ್ರಕಾಂತ್ ಅಪ್ಪಾಜಿ, ವಿದ್ಯಾವತಿ, ಶ್ರೀನಿವಾಸ್ ಹಾಗೂ ಆನಂದ್ ಪಾಟೀಲ್ ಸೇರಿದಂತೆ ಇತರರು ಇದ್ದರು.
Next Story