ಬೀದರ್ | ಸ್ವಯಂ ಉದ್ಯಮ ಪ್ರಾರಂಭಿಸಿ ಆರ್ಥಿಕ ಅಭಿವೃದ್ಧಿ ಸಾಧಿಸಿ : ಲೋಕೆಶ್ ಮಾನಸಿಂಗ್

ಬೀದರ್ : ಯುವಕರು ಉದ್ಯಮಗಳು ಪ್ರಾರಂಭಿಸಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ಪಡೆದು ಸ್ವಯಂ ಉದ್ಯಮ ಪ್ರಾರಂಭಿಸಿ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ಜಿಲ್ಲಾ ಕೌಶಲ್ಯ ಆಭಿವೃದ್ಧಿ ಅಧಿಕಾರಿ ಲೋಕೆಶ್ ಮಾನಸಿಂಗ್ ಅವರು ತಿಳಿಸಿದರು.
ಇಂದು ನಗರದ ಐಟಿಐ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಸರ್ಕಾರಿ ಐಟಿಐ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಭಾವಿ ಉದ್ಯಮಶೀಲರುಗಳಿಗೆ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮ ಪ್ರಾರಂಭಿಸಲು ಸಾಕಷ್ಟು ಅವಕಾಶಗಳು ಲಭ್ಯವಿರುತ್ತದೆ. ನಮ್ಮ ದೇಶದಲ್ಲಿ ಯುವ ಜನತೆ ಹೆಚ್ಚಿನ ಸಂಖೆಯಲ್ಲಿದ್ದು, ಬುದ್ಧಿವಂತರಿದ್ದಾರೆ. ಅವರಿಗೆ ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಶವಿರುತ್ತದೆ ಎಂದುರು.
ಲೀಡ್ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ಸತೀಷಕುಮಾರ್ ಗಾಯಕವಾಡ್, ಬೀದರ್ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀಕಾಂತ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಿಡಾಕ್ ಜಿಲ್ಲಾ ತರಬೇತಿದಾರ ಮಲ್ಲಪ್ಪಾ ಟಿ.ಮೇತ್ರೆ ಹಾಗೂ ಸಂಪನ್ಮೂಲ ವ್ಯಕ್ತಿ ದಿಲೀಪಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.







