Bidar | ಸಾಹಿತಿ ವಿಜಯಲಕ್ಷ್ಮಿ ಕೌಟಗೆಗೆ ರಾಜ್ಯಮಟ್ಟದ ಬಸವಶ್ರೀ ಪುರಸ್ಕಾರ

ಬೀದರ್: ಸಾಹಿತ್ಯ ಹಾಗೂ ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಅವರನ್ನು ಬೆಂಗಳೂರಿನ ಜ್ಞಾನ ಮಂದಾರ ಎಜುಕೇಷನಲ್ ಅಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಬಸವಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಎಚ್. ಸೋಮಶೇಖರ್ ತಿಳಿಸಿದ್ದಾರೆ.
ವಿಜಯಲಕ್ಷ್ಮಿ ಕೌಟಗೆ ಅವರು ಕಳೆದ ಎರಡು ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ 20ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.29ರಂದು ಬೆಂಗಳೂರಿನ ಜೆಎಸ್ಎಸ್ ಸಭಾಂಗಣದಲ್ಲಿ ನಡೆಯಲಿರುವ ಜ್ಞಾನ ಮಂದಾರ ಎಜುಕೇಷನಲ್ ಅಂಡ್ ಕಲ್ಚರಲ್ ಟ್ರಸ್ಟ್‌ನ ಬೆಳ್ಳಿ ಹಬ್ಬ ಸಮಾರಂಭದಲ್ಲಿ ವಿಜಯಲಕ್ಷ್ಮಿ ಕೌಟಗೆ ಅವರಿಗೆ ಬಸವಶ್ರೀ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Next Story




