ಬೀದರ್ | ವ್ಯಾಪಾರಿಕರಣದ ಶಿಕ್ಷಣ ನಿಲ್ಲಿಸಿ, ಸರಕಾರಿ ಶಾಲೆ ಉಳಿಸಿ : ಪಿಡಿಓ ರಾಮಣ್ಣ

ಬೀದರ್ : ಗ್ರಾಮೀಣ ಭಾಗದಲ್ಲಿ ಶಿಕ್ಷಣ ವ್ಯಾಪಾರಿಕರಣವಾಗುತ್ತಿದ್ದು, ಇದಕ್ಕೆ ವಿದ್ಯಾರ್ಥಿಗಳ ತಂದೆ ತಾಯಿಗಳು ಕಾರಣರಾಗಿದ್ದಾರೆ. ವ್ಯಾಪಾರಿಕರಣದ ಶಿಕ್ಷಣ ನಿಲ್ಲಿಸುವ ಮೂಲಕ ಸರ್ಕಾರಿ ಶಾಲೆ ಉಳಿಸಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಮಣ್ಣ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇಂದು ಮಿರ್ಜಾಪೂರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಯಾಕತಪೂರನ ದಾನಿಶ ಎಜ್ಯೂಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಪ್ರವೇಶ ಪಡೆದು ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ಇದನ್ನು ನಿರ್ಲಕ್ಷ ಮಾಡಿ ನಗರ ಭಾಗಗಳಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಪಾವತಿಸಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಇದು ನಮ್ಮೂರ ಸರ್ಕಾರಿ ಶಾಲೆಗಳು ನಾವೇ ಹಾಳು ಮಾಡಿಕೊಂಡಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ವೀರ ಕನ್ನಡಿಗರ ಸೇನೆಯ ರಾಜ್ಯ ಸಂಚಾಲಕ ಡಾ. ಸುಬ್ಬಣ್ಣಾ ಕರಕನಳ್ಳಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ದಾನಿಶ ಎಜ್ಯೂಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೌಸುದ್ದೀನ್, ನಾಗೋರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಫುಲಮ್ಮಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ನರಸಪ್ಪಾ ಜಾನಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಣ್ಣಾರಾವ ಪಾಟೀಲ್, ಅಶೋಕ ಲಿಗಾಡೆ, ಶಿಕ್ಷಕರಾದ ವಿಜಯಕುಮಾರ್, ಎನ್ಎಚ್ ಅನ್ವರ್, ಅನೀಲಕುಮಾರ್, ಕಲಾವತಿ ಹಾಗೂ ಉಪೇಂದ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







