Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರೈಲ್ವೆ ಹಳಿ ಅತಿಕ್ರಮಿಸಿದರೆ...

Bidar | ರೈಲ್ವೆ ಹಳಿ ಅತಿಕ್ರಮಿಸಿದರೆ ಕಠಿಣ ಕ್ರಮ : ಸಾರ್ವಜನಿಕರಿಗೆ ರೈಲ್ವೆ ಪೊಲೀಸರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ2 Aug 2026 11:08 PM IST
share
Bidar | ರೈಲ್ವೆ ಹಳಿ ಅತಿಕ್ರಮಿಸಿದರೆ ಕಠಿಣ ಕ್ರಮ : ಸಾರ್ವಜನಿಕರಿಗೆ ರೈಲ್ವೆ ಪೊಲೀಸರ ಎಚ್ಚರಿಕೆ
ಪ್ರಸಕ್ತ ವರ್ಷದ ಜುಲೈ ಅಂತ್ಯದವರೆಗೆ 657 ಜನರ ವಿರುದ್ಧ ಪ್ರಕರಣ ದಾಖಲು, 3,28,500 ರೂ. ದಂಡ

ಬೀದರ್: ರೈಲ್ವೆ ಹಳಿಗಳನ್ನು ಅಕ್ರಮವಾಗಿ ದಾಟುವುದು, ಚಲಿಸುವ ರೈಲುಗಳ ಮೇಲೆ ಕಲ್ಲು ತೂರುವುದು ಹಾಗೂ ರೈಲು ಹಳಿಗಳ ಮೇಲೆ ಕಲ್ಲು ಅಥವಾ ಇತರ ವಸ್ತುಗಳನ್ನು ಇಡುವಂತಹ ಅಪಾಯಕಾರಿ ಕೃತ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಇತ್ತೀಚಿನ ದಿನಗಳಲ್ಲಿ ಕೆಲವರು, ವಿಶೇಷವಾಗಿ ವಿದ್ಯಾರ್ಥಿಗಳು, ಮೋಟಾರ್ ಸೈಕಲ್‌ಗಳೊಂದಿಗೆ ರೈಲ್ವೆ ಹಳಿಗಳನ್ನು ಅತಿಕ್ರಮಿಸಿ ಅಪಘಾತಗಳಿಗೆ ಒಳಗಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಕೃತ್ಯಗಳು ರೈಲ್ವೆ ಕಾಯ್ದೆಯ ಸೆಕ್ಷನ್ 147 ಮತ್ತು 153ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಇಲಾಖೆ ತಿಳಿಸಿದೆ.

ಅದೇ ರೀತಿ, ಚಲಿಸುವ ರೈಲುಗಳ ಮೇಲೆ ಕಲ್ಲು ತೂರುವುದು ಹಾಗೂ ರೈಲು ಹಳಿಗಳ ಮೇಲೆ ಕಲ್ಲು ಅಥವಾ ಇತರ ವಸ್ತುಗಳನ್ನು ಇರಿಸಿ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ಉಂಟುಮಾಡುವುದು ಗಂಭೀರ ಅಪರಾಧವಾಗಿದೆ. ಇಂತಹ ಪ್ರಕರಣಗಳಲ್ಲಿ ರೈಲ್ವೆ ಕಾಯ್ದೆಯ ಸೆಕ್ಷನ್ 150, 151, 152 ಮತ್ತು 153ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರು ರೈಲ್ವೆ ಹಳಿಗಳನ್ನು ಅತಿಕ್ರಮಿಸದೆ ರಸ್ತೆ ಮೇಲ್ಸೇತುವೆ, ರಸ್ತೆ ಕೆಳಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ಮೂಲಕವೇ ಸಂಚರಿಸುವಂತೆ ಇಲಾಖೆ ಮನವಿ ಮಾಡಿದೆ. ಜೊತೆಗೆ, ಚಲಿಸುವ ರೈಲುಗಳ ಮೇಲೆ ಕಲ್ಲು ಎಸೆಯುವುದು ಹಾಗೂ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಡುವಂತಹ ಕೃತ್ಯಗಳಿಂದ ದೂರವಿರಬೇಕು ಎಂದು ಸೂಚಿಸಿದೆ.

ಪ್ರಸಕ್ತ ವರ್ಷದ ಜುಲೈ ಅಂತ್ಯದವರೆಗೆ ರೈಲ್ವೆ ಹಳಿಗಳನ್ನು ಅತಿಕ್ರಮಿಸಿದ 657 ಜನರ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 147ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 3,28,500 ರೂ. ದಂಡ ವಿಧಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X