Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಗ್ಯಾರಂಟಿ ಯೋಜನೆಗಳ ಅನುಷ್ಠಾನ...

Bidar | ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ವರದಿ ವಾರದೊಳಗೆ ಸಲ್ಲಿಸಿ : ಪಿ.ಟಿ.ಪರಮೇಶ್ವರ್ ನಾಯಕ

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ4 Nov 2026 8:07 PM IST
share
Bidar | ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ವರದಿ ವಾರದೊಳಗೆ ಸಲ್ಲಿಸಿ : ಪಿ.ಟಿ.ಪರಮೇಶ್ವರ್ ನಾಯಕ

ಬೀದರ್: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಚರ್ಚಿಸಿದ ವಿಷಯಗಳು ಹಾಗೂ ನೀಡಿದ ಸಲಹೆ-ಸೂಚನೆಗಳ ಆಧಾರದಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ಸಮರ್ಪಕವಾಗಿ ತಲುಪಿರುವ ಕುರಿತು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ನಾಯಕ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಬೇಕು. ಅಲ್ಲದೆ, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡುವಂತೆ ಸೂಚಿಸಿದರು.

ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಮಸ್ಯೆಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 3,64,287 ಫಲಾನುಭವಿಗಳು ನೋಂದಣಿಯಾಗಿದ್ದು, ಪರಿಷ್ಕರಣೆ ಬಳಿಕ ಉಳಿದ 3,40,756 ಫಲಾನುಭವಿಗಳ ಖಾತೆಗಳಿಗೆ ಜುಲೈವರೆಗೆ ಒಟ್ಟು 2,111 ಕೋಟಿ 73 ಲಕ್ಷ ರೂ. ಜಮೆ ಮಾಡಲಾಗಿದೆ. ಬಾಕಿ ಇರುವ ಕಂತಿನ ಹಣವನ್ನೂ ಸಂಪನ್ಮೂಲ ಕ್ರೋಡೀಕರಿಸಿ ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಬೀದರ್ ಜಿಲ್ಲೆಯಲ್ಲಿ ಒಟ್ಟು 18 ಲಕ್ಷ ಜನಸಂಖ್ಯೆಯಿದ್ದು, ಅದರಲ್ಲಿ ಗ್ಯಾರಂಟಿ ಯೋಜನೆಗಳಡಿ ಸುಮಾರು 13 ಲಕ್ಷ ಫಲಾನುಭವಿಗಳಿದ್ದಾರೆ. ಕಳೆದ ಆರು ತಿಂಗಳಲ್ಲಿ ಮೃತಪಟ್ಟ ಸುಮಾರು 7 ಸಾವಿರ ಜನರನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ವೈದ್ಯಕೀಯ ಹಿನ್ನೆಲೆ ಹೊಂದಿರುವ ಸುಮಾರು 100 ಜನರನ್ನು ಗುರುತಿಸಿ ಪಡಿತರ ಚೀಟಿಗಳನ್ನು ನೀಡಲಾಗಿದೆ. ಫಲಾನುಭವಿಗಳಿಗೆ ಕಡ್ಡಾಯವಾಗಿ ಪಡಿತರ ವಿತರಿಸಬೇಕು. ಪಡಿತರ ಪಡೆಯಲು ಅರ್ಹವಾಗಿರುವ ಕುಟುಂಬಗಳು ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಗೃಹಜ್ಯೋತಿ ಯೋಜನೆಯಡಿ ನಿಜವಾದ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ದೊರೆಯುವಂತಾಗಬೇಕು. ತೆರಿಗೆ ಪಾವತಿಸುವವರನ್ನು ಹಾಗೂ ಹೊರ ಜಿಲ್ಲೆಗಳಿಂದ ಬಂದು ನೆಲೆಸಿರುವವರನ್ನು ಗುರುತಿಸಿ ಯೋಜನೆಯಿಂದ ಹೊರಗಿಡಬೇಕು. ನಿಖರವಾಗಿ ಸಮೀಕ್ಷೆ ನಡೆಸಿ ಯೋಜನೆಯಿಂದ ವಂಚಿತರಾದ ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕು. ಪರಿಷ್ಕರಣೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 19.59 ಲಕ್ಷದಷ್ಟು ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಹಾಲುಣಿಸುವ ಕೊಠಡಿ, ಕುಡಿಯುವ ಶುದ್ಧ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಕುರಿತು ಸ್ಥಳೀಯ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ನಿಯೋಗದೊಂದಿಗೆ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಕಾಲೇಜು ವಿದ್ಯಾರ್ಥಿಗಳು ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಿಗೆ ಭೇಟಿ ನೀಡಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯುವಜನರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸಿ, ಕರಪತ್ರಗಳ ಮೂಲಕ ಮಾಹಿತಿ ನೀಡಿ ಅರ್ಹರು ಸೌಲಭ್ಯ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾಧವರಾವ್ ಗಿತ್ತೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸದಸ್ಯರು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X